ಚನ್ನರಾಯಪಟ್ಟಣ, ಮಾ.16: ತಾಲೂಕಿನ ಬಾಗೂರು ಹೋಬಳಿಯ ಕೆ.ಬೈರಾಪುರ ಗ್ರಾಮದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷಗಳಿಗೆ ರಾಜಕೀಯವಾಗಿ ಹಿನ್ನಡೆಯಾಗುವ ಬೆಳವಣಿಗೆಯೊಂದು ನಡೆದಿದ್ದು, ಹಲವರು ತಮ್ಮ ಹಳೆಯ ಪಕ್ಷಗಳನ್ನು ತೊರೆದು ಭಾರತೀಯ ಜನತಾ ಪಕ್ಷ (ಬಿಜೆಪಿ) ಸೇರ್ಪಡೆಯಾದರು.
ಶ್ರವಣಬೆಳಗೊಳ ವಿಧಾನಸಭಾ ಕ್ಷೇತ್ರದ ಬಿಜೆಪಿ ಮುಖಂಡರಾದ ಸಿ.ಆರ್. ಚಿದಾನಂದಗೌಡರ ನೇತೃತ್ವದಲ್ಲಿ ನಡೆದ ಕಾರ್ಯಕ್ರಮದಲ್ಲಿ ಗ್ರಾಮದ ಹಲವಾರು ಯುವಕರು ಹಾಗೂ ಮುಖಂಡರು ಅಧಿಕೃತವಾಗಿ ಬಿಜೆಪಿ ಪಕ್ಷವನ್ನು ಸೇರ್ಪಡೆಯಾದರು.
ಬಿಜೆಪಿ ಸೇರ್ಪಡೆಯಾದವರಲ್ಲಿ ಅಭಿಲಾಶ್, ಮಧು, ಮುತ್ತುರಾಜ್, ಗವೀಪ್ರಸಾದ್, ಲೋಹಿತ್, ಪ್ರಮೋದ್, ಜಾನು, ಬಸವರಾಜ್, ಸಿದ್ದೇಗೌಡ, ಶಿವಲಿಂಗೇಗೌಡ, ಶರಣಪ್ಪ, ಲಕ್ಷ್ಮೇಗೌಡ, ಶಿವಕುಮಾರ್ ಸೇರಿದಂತೆ ಗ್ರಾಮದ ಹಲವು ಗ್ರಾಮಸ್ಥರು ಭಾಗವಹಿಸಿದ್ದರು.

ಈ ಸಂದರ್ಭದಲ್ಲಿ ಮಾತನಾಡಿದ ಬಿಜೆಪಿ ಮುಖಂಡರು, ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಜನಪರ ಆಡಳಿತ, ರಾಜ್ಯ ಹಾಗೂ ಕ್ಷೇತ್ರ ಮಟ್ಟದಲ್ಲಿ ಪಕ್ಷದ ಬಲವರ್ಧನೆ ಮತ್ತು ಅಭಿವೃದ್ಧಿ ಕಾರ್ಯಗಳಿಂದ ಪ್ರೇರಿತರಾಗಿ ಹಲವರು ಬಿಜೆಪಿ ಸೇರುತ್ತಿದ್ದಾರೆ ಎಂದು ತಿಳಿಸಿದರು.
ಕೆ.ಬೈರಾಪುರ ಗ್ರಾಮದಲ್ಲಿ ನಡೆದ ಈ ಸೇರ್ಪಡೆ ಕಾರ್ಯಕ್ರಮವು ಶ್ರವಣಬೆಳಗೊಳ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಸಂಘಟನೆಗೆ ಮತ್ತಷ್ಟು ಬಲ ತುಂಬುವಂತೆ ಮಾಡಿದೆ ಎಂದು ಸ್ಥಳೀಯ ಕಾರ್ಯಕರ್ತರು ಅಭಿಪ್ರಾಯಪಟ್ಟರು.
ಗ್ರಾಮದ ಹಲವಾರು ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದು, ಹೊಸದಾಗಿ ಪಕ್ಷ ಸೇರ್ಪಡೆಯಾದವರಿಗೆ ಪಕ್ಷದ ಶಾಲು ಹೊದಿಸಿ ಸ್ವಾಗತಿಸಲಾಯಿತು.
– ಮಂಜುನಾಥ್ ಐ.ಕೆ
