ಚನ್ನರಾಯಪಟ್ಟಣ: ಕೃಷ್ಣರಾಜಪೇಟೆಯಲ್ಲಿ ಆಗಸ್ಟ್ 9 ರಂದು ನಡೆದ ಕಾವೇರಿ ಓಪನ್ ಕರಾಟೆ ಚಾಂಪಿಯನ್ಶಿಪ್ – 2026 ರಲ್ಲಿ ಚನ್ನರಾಯಪಟ್ಟಣ ಶ್ರೀ ವಿವೇಕಾನಂದ ಅಂತರಾಷ್ಟ್ರೀಯ ಶಾಲೆಯ 24 ವಿದ್ಯಾರ್ಥಿಗಳು ಭಾಗವಹಿಸಿ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿದ್ದಾರೆ.
ಹಲವು ವಿದ್ಯಾರ್ಥಿಗಳು ದ್ವಿತೀಯ ಸ್ಥಾನವನ್ನು ಮತ್ತು ಇನ್ನು ಕೆಲವು ವಿದ್ಯಾರ್ಥಿಗಳು ತೃತೀಯ ಸ್ಥಾನವನ್ನು ಪಡೆಯುವ ಮೂಲಕ ಸಮಗ್ರ ಪ್ರಶಸ್ತಿ ಪಡೆಯುವ ಮೂಲಕ ಗಮನಾರ್ಹ ಸಾಧನೆ ಮಾಡಿದ್ದಾರೆ. ಕಾವೇರಿ ಕರಾಟೆ ಚಾಂಪಿಯನ್ ಶಿಪ್ ಸ್ಪರ್ಧೆಯಲ್ಲಿ ರಾಜ್ಯದ ವಿವಿಧ ಭಾಗಗಳಿಂದ ಆಗಮಿಸಿದ್ದ ಸ್ಪರ್ಧಿಗಳ ನಡುವೆ ತುಂಬಾ ಪೈಪೋಟಿ ನಡೆಯಿತು.

ಭಾಗವಹಿಸಿದ ಎಲ್ಲಾ ಸ್ಪರ್ಧಿಗಳು ತುಂಬಾ ಆತ್ಮವಿಶ್ವಾಸದಿಂದ ಸ್ಪರ್ಧಿಸಿ ತಮ್ಮ ಪ್ರತಿಭೆಯನ್ನು ತೋರಿ ಮೆರೆದಿದ್ದಾರೆ. ಕಟಾ ವಿಭಾಗಗಳಲ್ಲಿ ಚನ್ನರಾಯಪಟ್ಟಣ ಶ್ರೀ ವಿವೇಕಾನಂದ ಅಂತರಾಷ್ಟ್ರೀಯ ಶಾಲೆಯ 24 ಜನ ಸ್ಪರ್ಧಿಗಳು ಪ್ರಶಸ್ತಿ ಗಳಿಸುವ ಮೂಲಕ ತಮ್ಮ ಶಾಲೆ, ಕುಟುಂಬ ಹಾಗೂ ಕರಾಟೆ ತರಬೇತಿದಾರರಿಗೆ ಮತ್ತು ಕ್ರೀಡಾಭಿಮಾನಿಗಳಿಗೆ ಹೆಮ್ಮೆ ತಂದಿದ್ದಾರೆ. ಕಾವೇರಿ ಕರಾಟೆ ಚಾಂಪಿಯನ್ ಶಿಪ್ 2026ರಲ್ಲಿ ಗಣನೀಯ ಸಾಧನೆ ಮಾಡಿದ ಕರಾಟೆ ಪಟುಗಳನ್ನು ಶ್ರೀ ವಿವೇಕಾನಂದ ವಿದ್ಯಾ ಸಂಸ್ಥೆಯ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು.ಕರಾಟೆ ತರಬೇತುದಾರರಾದ ನಟರಾಜು ಮತ್ತು ಮಹಾಂತೇಶ್ ಅವರ ಮಾರ್ಗದರ್ಶನದಲ್ಲಿ ನಿರಂತರವಾಗಿ ತರಬೇತಿ ಪಡೆಯುತ್ತಿದ್ದಾರೆ. ಶಿಸ್ತು, ನಿರಂತರ ಅಭ್ಯಾಸ ಹಾಗೂ ಕಠಿಣ ಪರಿಶ್ರಮದಿಂದ ಈ ಸಾಧನೆ ಸಾಧ್ಯವಾಗಿದೆ.
ವಿದ್ಯಾರ್ಥಿಗಳ ಸಾಧನೆಗೆ ಶ್ರೀ ವಿವೇಕಾನಂದ ಅಂತರಾಷ್ಟ್ರೀಯ ಶಾಲೆಯ ಆಡಳಿತ ಮಂಡಳಿ, ಪ್ರಾಂಶುಪಾಲರು, ಶಿಕ್ಷಕರು ಹಾಗೂ ಸಹಪಾಠಿಗಳು ಅಭಿನಂದನೆ ಸಲ್ಲಿಸಿದ್ದಾರೆ. ಇದೇ ಸಂದರ್ಭದಲ್ಲಿ ಶ್ರೀ ವಿವೇಕಾನಂದ ಅಂತರಾಷ್ಟ್ರೀಯ ಶಾಲೆಯ ಪ್ರಾಂಶುಪಾಲರಾದ ಈ ಮಹದೇವ್, ಕರಾಟೆ ತರಬೇತಿದಾರರಾದ ನಟರಾಜು ಮತ್ತು ಮಾಲ್ತೇಶ್, ಸೇರಿದಂತೆ ಇತರರು ಹಾಜರಿದ್ದರು.
– ಮಂಜುನಾಥ್ ಐ.ಕೆ.
