ಚನ್ನರಾಯಪಟ್ಟಣ: ಶ್ರೀ ದಿಗಂಬರ ಜೈನ ಮಹಾ ಸಂಸ್ಥಾನ ಮಠ ಶ್ರೀ ಕ್ಷೇತ್ರ ಶ್ರವಣಬೆಳಗೊಳ ಮತ್ತು ದಕ್ಷಿಣ ಭಾರತ ದಿಗಂಬರ ಜೈನ ಅರ್ಚಕರ ಸಂಘ ಕೇಂದ್ರ ಮೈಸೂರು ಇವರ ಸಂಯುಕ್ತ ಆಶ್ರಯದಲ್ಲಿ 2026ರ ಜನವರಿ 6ನೇ ಮಂಗಳವಾರ ಮತ್ತು 7ನೇ ಬುಧವಾರದಂದು ಶ್ರವಣಬೆಳಗೊಳದ ಶ್ರೀ ಕಾನಜಿ ಯಾತ್ರಿಕಾಶ್ರಮದಲ್ಲಿ ಐದನೇ ದಕ್ಷಿಣ ಭಾರತ ದಿಗಂಬರ ಜೈನ ಅರ್ಚಕ ಸಮ್ಮೇಳನ ನಡೆಯಲಿದೆ ಎಂದು ಡಾ. ಮೋಹನ್ ಕುಮಾರ್ ಶಾಸ್ತ್ರಿ ಅವರು ತಿಳಿಸಿದರು.

ಈ ಕಾರ್ಯಕ್ರಮದಲ್ಲಿ ಶ್ರೀ ಕ್ಷೇತ್ರ ಕನಕಗಿರಿ ದಿಗಂಬರ ಜೈನ ಮಠದ ಪರಮ ಪೂಜ್ಯ ಸ್ವಸ್ತಿ ಶ್ರೀ ಭುವನ ಕೀರ್ತಿ ಭಟ್ಟಾರಕ ಮಹಾಸ್ವಾಮಿಗಳು, ಶ್ರೀ ಕ್ಷೇತ್ರ ಶ್ರವಣಬೆಳಗೊಳದ ದಿಗಂಬರ ಜೈನ ಮಹಾ ಸಂಸ್ಥಾನ ಮಠದ ಪರಮಪೂಜ್ಯ ಜಗದ್ಗುರು ಸ್ವಸ್ತಿಶ್ರೀ ಚಾರುಕೀರ್ತಿ ಪಂಡಿತಾಚಾರ್ಯ ಭಟ್ಟಾರಕ ಪಟ್ಟಾಚಾರ್ಯ ಮಹಾಸ್ವಾಮಿಗಳು ದಿವ್ಯ ಸಾನಿಧ್ಯ ಹಾಗೂ ಮಾರ್ಗದರ್ಶನದಲ್ಲಿ ನಡೆಯಲಿದೆ ಎಂದು ಮಾಹಿತಿ ನೀಡಿದರು.
ಈ ಪತ್ರಿಕಾಗೋಷ್ಠಿಯಲ್ಲಿ ದಿಗಂಬರ ಜೈನ ಅರ್ಚಕ ಸಂಘದ ಪದಾಧಿಕಾರಿಗಳಾದ ವಿದ್ಯಾವಾಚಸ್ಪತಿ ಡಾ.ಎಚ್ ಬಿ ಮೋಹನ್ ಕುಮಾರ್ ಶಾಸ್ತ್ರಿ ಪ್ರತಿಷ್ಠಾಚಾರ್ಯ, ಡಾ.ಎಂ ಎಸ್ ಸನ್ಮತಿ ಕುಮಾರ್ ಶಾಸ್ತ್ರಿ, ಪ್ರಶಾಂತ್ ಕುಮಾರ್ ಹಾಜರಿದ್ದರು.
– ಮಂಜುನಾಥ್ ಐ ಕೆ.
