ಚನ್ನರಾಯಪಟ್ಟಣ: ಮೈಸೂರು ನಗರ ವ್ಯಾಪ್ತಿಯ ಅಂತರ ಕಾಲೇಜುಗಳ ಕ್ರೀಡಾಕೂಟದಲ್ಲಿ ಯುವರಾಜ ಕಾಲೇಜಿನ ವಿದ್ಯಾರ್ಥಿ, ಅಥ್ಲೆಟಿಕ್ ಕ್ರೀಡಾಪಟು ಸಿ.ಎ. ಸೃಜನ್ ಎರಡು ಚಿನ್ನದ ಪದಕಗಳನ್ನು ಗೆದ್ದು ಸಾಧನೆ ಮಾಡಿದ್ದಾರೆ.
5000 ಮೀಟರ್ ಹಾಗೂ 1500 ಮೀಟರ್ ಓಟದ ಸ್ಪರ್ಧೆಗಳಲ್ಲಿ ಪ್ರಥಮ ಸ್ಥಾನ ಪಡೆಯುವ ಮೂಲಕ ಎರಡೂ ವಿಭಾಗಗಳಲ್ಲಿ ಚಿನ್ನದ ಪದಕ ತಮ್ಮದಾಗಿಸಿಕೊಂಡಿದ್ದಾರೆ.
ಮೈಸೂರು ನಗರದ ವಿವಿಧ ಕಾಲೇಜುಗಳ ವಿದ್ಯಾರ್ಥಿಗಳು ಭಾಗವಹಿಸಿದ್ದ ಕ್ರೀಡಾಕೂಟದಲ್ಲಿ ತೀವ್ರ ಪೈಪೋಟಿ ನಡುವೆ ಸೃಜನ್ ತಮ್ಮ ಪ್ರತಿಭೆ ಮೆರೆದಿದ್ದಾರೆ. ಈ ಸಾಧನೆಯೊಂದಿಗೆ ಅವರು ತಮ್ಮ ಕ್ರೀಡಾ ಜೀವನದಲ್ಲಿ ಒಟ್ಟು 10 ಚಿನ್ನದ ಪದಕಗಳನ್ನು ಗೆದ್ದ ಸಾಧನೆ ಮಾಡಿದ್ದಾರೆ.
– ಮಂಜುನಾಥ್ ಐ.ಕೆ.
