ಚನ್ನರಾಯಪಟ್ಟಣ– ಪಟ್ಟಣದ ಶ್ರೀ ವಿವೇಕಾನಂದ ಅಂತರಾಷ್ಟ್ರೀಯ ಶಾಲೆಯಲ್ಲಿ 17ನೇ ವರ್ಷದ ವಿವೇಕ ವೈಭವ ಕಾರ್ಯಕ್ರಮವನ್ನು ಸಾಹಿತಿ ಹಾಗೂ ಖ್ಯಾತ ಚಲನಚಿತ್ರ ನಿರ್ದೇಶಕರಾದ ನಾಗತಿಹಳ್ಳಿ ಚಂದ್ರಶೇಖರ್ ಅವರು ಉದ್ಘಾಟಿಸಿದರು.
ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಅವರು, ವಿದ್ಯಾರ್ಥಿಗಳು ಶಿಕ್ಷಣದ ಜೊತೆಗೆ ಮಾನವೀಯ ಮೌಲ್ಯಗಳು, ಸಾಂಸ್ಕೃತಿಕ ಅರಿವು ಹಾಗೂ ಸೃಜನಶೀಲತೆಯನ್ನು ಬೆಳೆಸಿಕೊಳ್ಳಬೇಕು ಎಂದು ಸಲಹೆ ನೀಡಿದರು. ಸ್ವಾಮಿ ವಿವೇಕಾನಂದರ ವಿಚಾರಧಾರೆಗಳು ಇಂದಿನ ಯುವಪೀಳಿಗೆಗೆ ದಾರಿ ದೀಪವಾಗಿವೆ ಎಂದು ಹೇಳಿದರು.

ಇದೇ ಸಂದರ್ಭದಲ್ಲಿ ಸ್ಥಳೀಯ ಶಾಸಕ ಸಿಎನ್ ಬಾಲಕೃಷ್ಣ ಮಾತನಾಡಿ, ವಿದ್ಯಾರ್ಥಿಗಳ ಸರ್ವತೋಮುಖ ಅಭಿವೃದ್ಧಿಗೆ ಇಂತಹ ಕಾರ್ಯಕ್ರಮಗಳು ಪೂರಕವಾಗಿವೆ ಎಂದು ಅಭಿಪ್ರಾಯಪಟ್ಟರು. ಶಿಕ್ಷಣ ಕ್ಷೇತ್ರದಲ್ಲಿ ಸಂಸ್ಥೆ ಮಾಡುತ್ತಿರುವ ಸೇವೆಯನ್ನು ಶ್ಲಾಘಿಸಿದರು.

ಕಾರ್ಯಕ್ರಮದಲ್ಲಿ ಶ್ರೀ ವಿವೇಕಾನಂದ ವಿದ್ಯಾ ಸಂಸ್ಥೆಯ ಅಧ್ಯಕ್ಷ ದಿನೇಶ್, ಕಾರ್ಯದರ್ಶಿ ಗೀತಾ ದಿನೇಶ್, ಶಾಲೆಯ ಪ್ರಾಂಶುಪಾಲ ಮಹದೇವ್ ಸೇರಿದಂತೆ ಶಿಕ್ಷಕರು, ವಿದ್ಯಾರ್ಥಿಗಳು ಹಾಗೂ ಪಾಲಕರು ಭಾಗವಹಿಸಿದ್ದರು. ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಿ ಕಾರ್ಯಕ್ರಮಕ್ಕೆ ಮೆರುಗು ನೀಡಿದವು.
– ಮಂಜುನಾಥ್ ಐ.ಕೆ

[…] ಇದನ್ನು ಓದು: ಚನ್ನರಾಯಪಟ್ಟಣ: ಶ್ರೀ ವಿವೇಕಾನಂದ ಅಂತರಾಷ್… […]