ಚನ್ನರಾಯಪಟ್ಟಣ: ತಾಲೂಕಿನಾದ್ಯಂತ ಬರಗಾಲದ ಪರಿಸ್ಥಿತಿ ತೀವ್ರಗೊಂಡಿರುವ ಹಿನ್ನೆಲೆಯಲ್ಲಿ ಹಲವು ಪ್ರದೇಶಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗಿದೆ. ಚನ್ನರಾಯಪಟ್ಟಣ ಪಟ್ಟಣದ 6ನೇ ವಾರ್ಡ್ನ ಹೌಸಿಂಗ್ ಬೋರ್ಡ್ ಬಡಾವಣೆಯಲ್ಲೂ ನೀರಿನ ಅಭಾವ ಉಂಟಾಗಿದ್ದು, ನಿವಾಸಿಗಳು ತೊಂದರೆ ಅನುಭವಿಸುತ್ತಿದ್ದಾರೆ.
ಸ್ಥಳೀಯರ ಸಮಸ್ಯೆಯನ್ನು ಮನಗಂಡ ಶ್ರವಣಬೆಳಗೊಳ ವಿಧಾನಸಭಾ ಕ್ಷೇತ್ರದ ಬಿಜೆಪಿ ಮುಖಂಡ ಹಾಗೂ ಬಿಜೆಪಿ ಪಕ್ಷದ ಪರಾಜಿತ ಅಭ್ಯರ್ಥಿ ಸಿ.ಆರ್. ಚಿದಾನಂದ್ ಅವರ ನೇತೃತ್ವದಲ್ಲಿ ಬಡಾವಣೆಯ ನಿವಾಸಿಗಳಿಗೆ ಉಚಿತ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಲಾಯಿತು.

ಬರಗಾಲದ ಹಿನ್ನೆಲೆಯಲ್ಲಿ ನೀರಿನ ಕೊರತೆ ಎದುರಿಸುತ್ತಿರುವ ಕುಟುಂಬಗಳಿಗೆ ತಾತ್ಕಾಲಿಕ ಪರಿಹಾರ ಒದಗಿಸುವ ಉದ್ದೇಶದಿಂದ ನೀರು ಪೂರೈಕೆ ಮಾಡಲಾಯಿತು. ಸಾರ್ವಜನಿಕರಿಗೆ ಅಗತ್ಯ ಸಂದರ್ಭದಲ್ಲಿ ನೆರವಾಗುವ ನಿಟ್ಟಿನಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಮುಖಂಡರು ತಿಳಿಸಿದರು.
ಈ ಸಂದರ್ಭದಲ್ಲಿ ಮಾಜಿ ಪುರಸಭಾ ಸದಸ್ಯ ಕೆರೆಬೀದಿ ಜಗದೀಶ್, ತಾಲೂಕು ಬಿಜೆಪಿ ಖಜಾಂಚಿ ಸಂತೋಷ್, ಬಿಜೆಪಿ ಮುಖಂಡರಾದ ಆನಂದ್, ಜಯರಾಮ್, ಕೇಬಲ್ (ಕುಳ್ಳ್) ಗಿರೀಶ್, ಅರುಣ್, ಸಂಜಯ್, ನೇತ್ರ, ದಿವ್ಯ, ಸತ್ಯ ಸೇರಿದಂತೆ ಹಲವು ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.
– ಮಂಜುನಾಥ್ ಐ.ಕೆ.
