ಚನ್ನರಾಯಪಟ್ಟಣ: ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಚನ್ನರಾಯಪಟ್ಟಣ ಇವರ ವತಿಯಿಂದ ವಿಶ್ವ ರೆಡ್ ಕ್ರಾಸ್ ದಿನಾಚರಣೆ ಕಾರ್ಯಕ್ರಮವನ್ನು ಶಾಸಕ ಸಿ ಎನ್ ಬಾಲಕೃಷ್ಣ ಉದ್ಘಾಟಿಸಿದರು. ಪಟ್ಟಣದ ಸರ್ಕಾರಿ ನೌಕರರ ಭವನದಲ್ಲಿ ಏರ್ಪಡಿಸಿದ ವಿಶ್ವ ರೇಡ್ ಕ್ರಾಸ್ ದಿನಾಚರಣೆಯ ಕಾರ್ಯಕ್ರಮದಲ್ಲಿ ವಿಕಲ ಚೇತನರಿಗೆ ಉಚಿತವಾಗಿ ವೀಲ್ ಚೇರ್ ವಿತರಣೆ ಮಾಡಲಾಯಿತು.
ಕ್ಯಾನ್ಸರ್ ರೋಗಿಗಳಿಗೆ ಮೊಟ್ಟೆ ಹಾಗೂ ಪೌಷ್ಟಿಕ ಆಹಾರ ವಿತರಣೆ ಮಾಡಲಾಯಿತು, 2025 26ನೇ ಸಾಲಿನ ಜೂನಿಯರ್ ಎರಡು ಕ್ರಾಸ್ ಪರೀಕ್ಷೆಯಲ್ಲಿ ತಾಲೂಕು ಮಟ್ಟದಲ್ಲಿ ಅತಿ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳಿಗೆ ಸನ್ಮಾನಿಸಿ ಗೌರವಿಸಲಾಯಿತು.

ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದ ಶಾಸಕ ಸಿ ಎಂ ಬಾಲಕೃಷ್ಣರವರು ಭಾರತೀಯ ರೆಡ್ ಕ್ರಾಸ್ ಸಂಸ್ಥೆಯು ಕಳೆದ 15 ವರ್ಷಗಳಿಂದ ಜಿಲ್ಲಾ ಸಭಾಪತಿಗಳಾದ ಎಚ್ಪಿ ಮೋಹನ್ ಕುಮಾರ್ ಅವರ ನೇತೃತ್ವದಲ್ಲಿ ಅತ್ಯುನ್ನತ ಜನೋಪಯೋಗಿ ಕಾರ್ಯಕ್ರಮಗಳನ್ನು ಏರ್ಪಡಿಸುವ ಮೂಲಕ ಹಾಸನ ಜಿಲ್ಲೆಯ ಪ್ರತಿಯೊಂದು ಮನೆಯಲ್ಲೂ ಮನೆಮಾತಾಗಿದ್ದಾರೆ ಎಂದರು, ಇವರ ನೇತೃತ್ವದಲ್ಲಿ ಉಚಿತ ರಕ್ತದಾನ ಶಿಬಿರಗಳು ಏರ್ಪಡಿಸುವ ಮೂಲಕ ತುರ್ತು ಪರಿಸ್ಥಿತಿಯಲ್ಲಿರುವ ರೋಗಿಗಳ ಪ್ರಾಣ ಉಳಿಸುವಲ್ಲಿ ಯಶಸ್ವಿಯಾಗಿದ್ದಾರೆ ಎಂದರು.
ಅದೇ ರೀತಿ ಚನ್ನರಾಯಪಟ್ಟಣದಲ್ಲಿ ಸ್ವಯಂ ಪ್ರೇರಿತ ರಕ್ತ ಕೇಂದ್ರವನ್ನು ಪ್ರಾರಂಭ ಮಾಡುವ ಮೂಲಕ ಚನ್ನರಾಯಪಟ್ಟಣ, ಹೊಳೆನರಸೀಪುರ, ಅರಸೀಕೆರೆ, ನಾಗಮಂಗಲ, ಕೆ ಆರ್ ಪೇಟೆ ತಿಪಟೂರು, ಸೇರಿದಂತೆ ವಿವಿಧ ತಾಲೂಕುಗಳ ರೋಗಿಗಳಿಗೆ ತುರ್ತು ಪರಿಸ್ಥಿತಿಗಳಲ್ಲಿ ಶೀಘ್ರ ರಕ್ತ ಸಿಗುವಂತೆ ಶ್ರಮಿಸುತ್ತಿರುವ ಎಚ್ ಡಿ ಭರತ್ ಕುಮಾರ್ ಅವರಿಗೂ ಇದೇ ಸಂದರ್ಭದಲ್ಲಿ ಅಭಿನಂದನೆಗಳನ್ನು ತಿಳಿಸಿದರು.
ಇದೇ ಸಂದರ್ಭದಲ್ಲಿ ಶ್ರವಣಬೆಳಗೊಳ ವಿಧಾನಸಭಾ ಕ್ಷೇತ್ರದ ಶಾಸಕರಾದ ಸಿ ಎನ್ ಬಾಲಕೃಷ್ಣ, ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ಹಾಸನ ಜಿಲ್ಲಾ ಸಭಾಪತಿಗಳಾದ ಎಚ್ಪಿ ಮೋಹನ್, ತಾಲೂಕು ದಂಡಾಧಿಕಾರಿಗಳು ಹಾಗೂ ರೆಡ್ ಕ್ರಾಸ್ ಸಂಸ್ಥೆಯ ಅಧ್ಯಕ್ಷರಾದ ಜಿ ಎಸ್ ಶಂಕರಪ್ಪ, ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಸತೀಶ್, ಬಿಜೆಪಿ ಮುಖಂಡರಾದ ಸಿ ಆರ್ ಚಿದಾನಂದ, ತಾಲೂಕು ವಿಕಲಚೇತನ ಕ್ಷೇಮಭಿವೃದ್ಧಿ ಸಂಘದ ಅಧ್ಯಕ್ಷರಾದ ಸಿ ಜಿ ಸೋಮಶೇಖರ್, ತಾಲೂಕು ರೆಡ್ ಕ್ರಾಸ್ ಸಂಸ್ಥೆಯ ಸಭಾಪತಿಗಳಾದ ಎಚ್ ಜಿ ಭರತ್ ಕುಮಾರ್, ಕಾರ್ಯದರ್ಶಿ ಜಬಿವುಲ್ಲಾ, ಖಜಾಂಚಿ ಕಿಶೋರ್ ಕುಮಾರ್ ಸೇರಿದಂತೆ ಇತರರು ಹಾಜರಿದ್ದರು.
ವರದಿ : ಐ ಕೆ ಮಂಜುನಾಥ್
