
ಚಿಕ್ಕಮಗಳೂರು: ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕರ್ನಾಟಕ ಕೌಶಲ್ಯಾಭಿವೃದ್ಧಿ ನಿಗಮ, ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಅಭಿಯಾನ(ಸಂಜೀವಿನಿ), ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ, ಜಿಲ್ಲಾ ಸರ್ಕಾರಿ ನೌಕರರ ಸಂಘ, ಹಾಗೂ ಐ.ಡಿ.ಎಸ್.ಜಿ. ಸರ್ಕಾರಿ ಕಾಲೇಜು, ಚಿಕ್ಕಮಗಳೂರು ಇವರ ಸಂಯುಕ್ತಾಶ್ರಯದಲ್ಲಿ ಮಾರ್ಚ್ 02 ರಂದು ಬೆಳಿಗ್ಗೆ 9.30 ಗಂಟೆಯಿಂದ ಸಂಜೆ 4.30 ಗಂಟೆಯವರೆಗೆ ನಗರದ ಐ.ಡಿ.ಎಸ್.ಜಿ. ಸರ್ಕಾರಿ ಕಾಲೇಜಿನಲ್ಲಿ ಸಂಕಲ್ಪ ಯೋಜನೆಯ ಸರ್ವರಿಗೂ ಉದ್ಯೋಗ ಕಾರ್ಯಕ್ರಮದಡಿ ಜಿಲ್ಲಾ ಮಟ್ಟದ ಕೌಶಲ್ಯ ರೋಜ್ ಗಾರ್ ಉದ್ಯೋಗಮೇಳ-೨೦೨೫ರ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.
ಇಂಧನ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ. ಜಾರ್ಜ್ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ, ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಸಚಿವ ಡಾ. ಶರಣಪ್ರಕಾಶ್ ರುದ್ರಪ್ಪ ಪಾಟೀಲ್ ಗೌರವಾನ್ವಿತ ಉಪಸ್ಥಿತರಿರಲಿದ್ದಾರೆ,
ವಿಧಾನ ಪರಿಷತ್ ಉಪ ಸಭಾಪತಿ ಎಂ.ಕೆ. ಪ್ರಾಣೇಶ್, ಕರ್ನಾಟಕ ನವೀಕರಿಸಬಹುದಾದ ಇಂಧನ ಅಭಿವೃದ್ಧಿ ನಿಗಮದ ಅಧ್ಯಕ್ಷರು, ಬೆಂಗಳೂರು ಹಾಗೂ ಶೃಂಗೇರಿ ವಿಧಾನಸಭಾ ಕ್ಷೇತ್ರದ ಶಾಸಕ ಟಿ.ಡಿ. ರಾಜೇಗೌಡ, ಅನಿವಾಸಿ ಭಾರತೀಯ ಕೋಶ ಉಪಾಧ್ಯಕ್ಷೆ ಡಾ|| ಆರತಿ ಕೃಷ್ಣ, ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮದ ಅಧ್ಯಕ್ಷ ಎಂ. ಶ್ರೀನಿವಾಸ್ ಘನ ಉಪಸ್ಥಿತರಿರಲಿದ್ದಾರೆ, ಚಿಕ್ಕಮಗಳೂರು ವಿಧಾನ ಸಭಾ ಕ್ಷೇತ್ರದ ಶಾಸಕ ಹೆಚ್.ಡಿ. ತಮ್ಮಯ್ಯ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ.
ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದ ಕೋಟ ಶ್ರೀನಿವಾಸ ಪೂಜಾರಿ, ರಾಜ್ಯಸಭೆ ಸಂಸದ ಜೈರಾಮ್ ರಮೇಶ್, ಹಾಸನ ಲೋಕಸಭಾ ಕ್ಷೇತ್ರದ ಸಂಸದರಾದ ಶ್ರೇಯಸ್ ಎಂ ಪಟೇಲ್, ವಿಧಾನ ಪರಿಷತ್ ಶಾಸಕರಾದ ಎಸ್.ಎಲ್. ಭೋಜೆಗೌಡ, ಶಾಸಕರುಗಳಾದ ಜಿ. ಹೆಚ್. ಶ್ರೀನಿವಾಸ್, ಕೆ.ಎಸ್. ಆನಂದ್, ನಯನ ಮೋಟಮ್ಮ, ವಿಧಾನ ಪರಿಷತ್ ಶಾಸಕರಾದ ಸಿ.ಟಿ. ರವಿ, ವಿಧಾನ ಪರಿಷತ್ ಶಾಸಕರಾದ ಡಾ. ಧನಂಜಯ ಸರ್ಜಿ, ಭದ್ರಾ ಕಾಡಾ ಶಿವಮೊಗ್ಗ ಅಧ್ಯಕ್ಷರಾದ ಡಾ. ಕೆ.ಪಿ. ಅಂಶುಮಂತ್, ಕ. ರಾ. ಕೃಷಿ ಉತ್ಪನ್ನ ಸಂಸ್ಕರಣೆ ಮತ್ತು ರಫ್ತು ನಿಗಮ ಅಧ್ಯಕ್ಷರಾದ ಬಿ.ಹೆಚ್. ಹರೀಶ್, ಕರ್ನಾಟಕ ಕೌಶಲ್ಯಾಭಿವೃದ್ಧಿ ನಿಗಮ ಅಧ್ಯಕ್ಷ ಶಿವಕಾಂತಮ್ಮ (ಕಾಂತಾ) ನಾಯಕ್, ನಗರಸಭೆ ಅಧ್ಯಕ್ಷೆ ಸುಜಾತ ಶಿವಕುಮಾರ್ ಮತ್ತು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಜಿಲ್ಲಾ ಅಧ್ಯಕ್ಷ ಎಂ.ಸಿ. ಶಿವಾನಂದ ಸ್ವಾಮಿ ಮುಂತಾದವರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.