ಕೆ.ಆರ್.ಪೇಟೆ- ತಾಲೂಕಿನ ಕಿಕ್ಕೇರಿ ಹೋಬಳಿಯ ಚಿಕ್ಕತರಹಳ್ಳಿ ಗ್ರಾಮದ ಹಿರಿಯ ಮುಖಂಡರಾದ ರಾಮಕೃಷ್ಣೇಗೌಡ ರವರು ಆರೋಗ್ಯದಿಂದ ಬಳಲುತ್ತಿದ್ದ ಅವರು ಶ್ರೀ ಆದಿಚುಂಚನಗಿರಿಯ ಬಿಜಿಎಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು ಇಂದು ರಾತ್ರಿ 9:30 ಚಿಕಿತ್ಸೆ ಫಲಕಾರಿಯಾದೆ ಬಿಜಿಎಸ್ ಆಸ್ಪತ್ರೆಯಲ್ಲೇ ನಿಧನ ಹೊಂದಿದ್ದಾರೆ.
ಮೃತರ ಪತ್ನಿ ಟಿ.ಎ.ಪಿ.ಸಿ.ಎಂ.ಎಸ್ ಮಾಜಿ ನಿರ್ದೇಶಕಿ ಪುಟ್ಟತಾಯಮ್ಮ ರಾಮಕೃಷ್ಣೇಗೌಡ, ಇಬ್ಬರು ಗಂಡು ಮಕ್ಕಳು, ಓರ್ವೆ ಹೆಣ್ಣು ಮಗಳು, ಮೊಮ್ಮಕ್ಕಳು ಸೇರಿದಂತೆ ಅಪಾರ ಬಂಧು ಬಳಗವನ್ನು ಬಿಟ್ಟು ಅಗಲಿದ್ದಾರೆ ಮೃತರ ಅಂತ್ಯಸಂಸ್ಕಾರವು ಮಂಗಳವಾರ (ನಾಳೆ) ಮಧ್ಯಾಹ್ನ 2. ಗಂಟೆಗೆ ಸ್ವಗ್ರಾಮದಲ್ಲಿರುವ ಜಮೀನಿನಲ್ಲಿ ನೆರವೇರಲಿದೆ ಎಂದು ಕುಟುಂಬಸ್ಥರ ಮೂಲಗಳು ತಿಳಿಸುವೆ.
ಮೃತರ ನಿಧನಕ್ಕೆ ಶಾಸಕ ಹೆಚ್.ಟಿ ಮಂಜು,ಮಾಜಿ ಸಚಿವ ಕೆ.ಸಿ ನಾರಾಯಣಗೌಡ, ಮಾಜಿ ಶಾಸಕರಾದ ಕೆ.ಬಿ ಚಂದ್ರಶೇಖರ್, ಬಿ ಪ್ರಕಾಶ್,ಎಂ, ಪುಟ್ಟಸ್ವಾಮಿಗೌಡ,ಸಮಾಜ ಸೇವಕ ಆರ್.ಟಿ.ಓ ಮಲ್ಲಿಕಾರ್ಜುನ್, ಮನ್ಮುಲ್ ನಿರ್ದೇಶಕರಾದ ಡಾಲು ರವಿ, ಎಂ ಬಿ ಹರೀಶ್,ಕಾಂಗ್ರೆಸ್ ಮುಖಂಡ ವಿಜಯ್ ರಾಮೇಗೌಡ,ಕೆಪಿಸಿಸಿ ಸದಸ್ಯ ಕಿಕ್ಕೇರಿ ಸುರೇಶ್, ಟಿಎಪಿಸಿಎಂಎಸ್ ಮಾಜಿ ನಿರ್ದೇಶಕ ಸುರೇಶ್,ಜಿ.ಪಂ ಮಾಜಿ ಉಪಾಧ್ಯಕ್ಷ ಪ್ರಭಾಕರ್,ಟಿ.ಎ.ಪಿ.ಸಿ.ಎಂ.ಎಸ್ ನಿರ್ದೇಶಕ ಬಿ.ಎಂ ಕಿರಣ್,ಜೆಡಿಎಸ್ ಅಧ್ಯಕ್ಷ ಜಾನಕೀರಾಂ,ರಾಜ್ಯ ಸಹಕಾರ ಮಾರಾಟ ಮಹಾಮಂಡಳಿ ನಿರ್ದೇಶಕ ಎಸ್.ಎಲ್ ಮೋಹನ್,ಬಿಜೆಪಿ ಅಧ್ಯಕ್ಷ ಸಾರಂಗಿ ನಾಗಣ್ಣ,ಸೇರಿದಂತೆ ವಿವಿಧ ಪ್ರಗತಿಪರ ಸಂಘಟನೆಗಳ ಪ್ರತಿನಿಧಿಗಳು ತೀವ್ರ ಸಂತಾಪ ಸೂಚಿಸಿದ್ದಾರೆ.
ಮಾಹಿತಿಯೊಂದಿಗೆ ಮನು ಮಾಕವಳ್ಳಿ ಕೆ ಆರ್ ಪೇಟೆ
