ಕೆ.ಆರ್.ಪೇಟೆ. ಖಾಸಗಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಓದಿದ ಮಕ್ಕಳು ಆಂಗ್ಲ ಭಾಷೆಗಷ್ಟೇ ಸೀಮಿತರಾಗಿರುತ್ತಾರೆ, ಸರ್ಕಾರಿ ಕನ್ನಡ ಮಾಧ್ಯಮ ಶಾಲೆಯಲ್ಲಿ ಓದಿದ ಮಕ್ಕಳು ಕನ್ನಡ ಮತ್ತು ಇಂಗ್ಲಿಷ್ ಎರಡು ಮಾಧ್ಯಮದಲ್ಲೂ ಓದುವ ಮೂಲಕ ತಮ್ಮ ನೈಪುಣ್ಯತೆ, ಚಮತ್ಕಾರವನ್ನು ಯಾವುದೇ ವೇದಿಕೆಯಲ್ಲಿ ಪ್ರದರ್ಶಿಸಲು ಸಜ್ಜಾಗಿರುತ್ತಾರೆ ಎಂದು ಸಮಾಜ ಸೇವಕ ಆರ್.ಟಿ.ಓ ಮಲ್ಲಿಕಾರ್ಜುನ್ ತಿಳಿಸಿದರು.
ತಾಲ್ಲೂಕಿನ ಬೂಕನಕೆರೆ ಹೋಬಳಿಯ ಮಾವಿನಕೆರೆ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಾರ್ಷಿಕೋತ್ಸವ ಹಾಗೂ ಶಾರದ ಪೂಜಾ ಮಕ್ಕಳ ಕಾರ್ಯಕ್ರಮವನ್ನು ಸಮಾಜ ಸೇವಕರಾದ ಆರ್.ಟಿ.ಓ ಮಲ್ಲಿಕಾರ್ಜುನ್ ಉದ್ಘಾಟಿಸಿ ಮಾತನಾಡಿದರು.
ರೈತರು ಮತ್ತು ಕಾರ್ಮಿಕ ವರ್ಗದ ಜನತೆ ಹಗಲಿರುಳು ಕಷ್ಟಪಟ್ಟು ದುಡಿದ ಹಣವನ್ನು ಖಾಸಗಿ ಶಾಲೆಗಳ ವ್ಯಾಮೋಹಕ್ಕೆ ಒಳಗಾಗಿ ಶುಲ್ಕಕ್ಕೆ ವ್ಯಯ ಮಾಡುತ್ತಿದ್ದು ನಿಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗೆ ಸೇರಿಸಿ ಖಾಸಗಿ ಶಾಲೆಗಳಿಗೆ ಕಟ್ಟುತ್ತಿದ್ದ ಅಲ್ಪ ಭಾಗದ ಹಣವನ್ನು ತಮ್ಮ ಗ್ರಾಮದಲ್ಲಿ ಇರುವ ಸರ್ಕಾರಿ ಶಾಲೆಯ ಅಭಿವೃದ್ಧಿಗೆ ಬಳಕೆ ಮಾಡುವುದರಿಂದ ಮಕ್ಕಳ ಸಮಗ್ರ ಬೆಳವಣಿಗೆಗೆ ತಾವೇ ಹೊತ್ತು ನೀಡಿದಂತಾಗುತ್ತದೆ.ಸಮಾಜದಲ್ಲಿ ಆರ್ಥಿಕವಾಗಿ ಹಿಂದುಳಿದ ಶೋಷಿತ ವರ್ಗ ಹಾಗೂ ಕೂಲಿ ಕಾರ್ಮಿಕರ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡುವ ಮೂಲಕ ಸಾಮಾಜಿಕ ನ್ಯಾಯ ಒದಗಿಸಲು ಸರ್ಕಾರಿ ಶಾಲೆಗಳು ಬಲವರ್ಧನೆಗೊಂಡಿವೆ. ಪ್ರಾಥಮಿಕ ಹಂತದಲ್ಲಿ ಮಕ್ಕಳಿಗೆ ಸಾಮಾಜಿಕ ಮತ್ತು ನ್ಯಾಯಬದ್ಧ ಹೊಣೆಗಾರಿಕೆಯ ಅರಿವು ಮೂಡಿಸಲು ಸರ್ಕಾರಿ ಶಾಲೆಗಳಿಂದ ಮಾತ್ರ ಸಾಧ್ಯ ಎಂದರು.
ಕಾರ್ಯಕ್ರಮ ಅಧ್ಯಕ್ಷತೆಯನ್ನ ಶಾಲಾ ಎಸ್.ಡಿ.ಎಂ.ಸಿ ಅಧ್ಯಕ್ಷ ರಮೇಶ್ ವಹಿಸಿದರು.ಬಳಿಕ ಶಾಲಾ ವಿದ್ಯಾರ್ಥಿಗಳು ವೈವಿದ್ಯಮಯ ನೃತ್ಯ ವೈಭವ,ಜಾನಪದ ನೃತ್ಯಗಳನ್ನು ವಿದ್ಯಾರ್ಥಿಗಳು ಅದ್ಭುತವಾಗಿ ಪ್ರದರ್ಶಿಸಿ ಕಾರ್ಯಕ್ರಮಕ್ಕೆ ಮೆರಗು ತುಂಬಿದರು.ಕಾರ್ಯಕ್ರಮ ಪಾಲ್ಗೊಳ್ಳುವ ಸಂದರ್ಭದಲ್ಲಿ ಸಮಾಜ ಸೇವಕ ಆರ್ ಟಿ ಓ ಮಲ್ಲಿಕಾರ್ಜುನ್ ರವರನ್ನ ಗ್ರಾಮಸ್ಥರು ಹಾಗೂ ಶಾಲಾ ಆಡಳಿತ ಮಂಡಳಿ ಕಾರ್ಯಕ್ರಮಕ್ಕೆ ಅದ್ದೂರಿಯಾಗಿ ಸ್ವಾಗತಿದರು.
ಈ ಸಂದರ್ಭದಲ್ಲಿ ಶಾಲಾ ಎಸ್.ಡಿ.ಎಂ.ಸಿ ಅಧ್ಯಕ್ಷ ರಮೇಶ್,ಸದಸ್ಯರಾದ ತ್ರಿಮೂರ್ತಿ, ರಾಘು ,ಪ್ರಕಾಶ್, ವಸಂತ್,ಮುಖ್ಯ ಶಿಕ್ಷಕ ಸೋಮಶೇಖರ್, ಮುಖಂಡ ಗೋಪಾಲ್,ರಾಜೇಶ್, ನಾಗೇಶ್,ಮಂಜುನಾಥ್,ಆರ್ ಟಿ ಓ ಮಲ್ಲಿಕಾರ್ಜುನ್ ಅವರ ಆಪ್ತ ಸಹಾಯಕ ಗಂಜಿಗೆರೆ ಮಹೇಶ್,ಸೇರಿದಂತೆ ಉಪಸ್ಥಿತರಿದ್ದರು.
ಸುದ್ದಿಯೊಂದಿಗೆ ಮನು ಮಾಕವಳ್ಳಿ ಕೆ ಆರ್ ಪೇಟೆ
