ಹಾಸನ: ಹಾಸನದಲ್ಲಿ ನಡೆಯಲಿರುವ ಚುಟುಕು ಸಾಹಿತ್ಯ ಸಮ್ಮೇಳನ ಅಂಗವಾಗಿ ಪಂಚಭಾಷಾ ಚುಟುಕು ಕವಿಗೋಷ್ಠಿಯನ್ನು ಆಯೋಜಿಸಲಾಗಿದ್ದು, ಭಾಗವಹಿಸಲು ಆಸಕ್ತ ಚುಟುಕು ಕವಿಗಳಿಂದ ಚುಟುಕುಗಳನ್ನು ಆಹ್ವಾನಿಸಲಾಗಿದೆ.
ಭಾಗವಹಿಸಲು ಇಚ್ಛಿಸುವ ಕವಿಗಳು ತಮ್ಮ ಪಾಸ್ಪೋರ್ಟ್ ಗಾತ್ರದ ಭಾವಚಿತ್ರ ಹಾಗೂ ಪರಿಚಯ ಪತ್ರದೊಂದಿಗೆ ತಾವು ಭಾಗವಹಿಸುವ ಭಾಷೆಯಲ್ಲಿ ಮೂರು ಚುಟುಕುಗಳನ್ನು 9844566748 ವಾಟ್ಸಾಪ್ ಸಂಖ್ಯೆಗೆ ಕಳುಹಿಸಬೇಕು ಎಂದು ಹಾಸನ ಜಿಲ್ಲಾ ಚುಟುಕು ಸಾಹಿತ್ಯ ಪರಿಷತ್ ಅಧ್ಯಕ್ಷ ಬಾ.ನಂ. ಲೋಕೇಶ್ ತಿಳಿಸಿದ್ದಾರೆ.
ಕವಿಗೋಷ್ಠಿಯಲ್ಲಿ ಭಾಗವಹಿಸುವ ಚುಟುಕು ಕವಿಗಳಿಗೆ “ಪಂಚಭಾಷಾ ಚುಟುಕು ಕೌಸ್ತುಭ” ಪ್ರಶಸ್ತಿ ನೀಡಿ ಗೌರವಿಸಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
