ಹಾಸನ : ಹಾಸನ ತಾಲ್ಲೂಕಿನ ಚುಟುಕು ಸಾಹಿತ್ಯ ಪರಿಷತ್ ಅಧ್ಯಕ್ಷ ಸೋಮನಾಯಕ್ ರವರು ಜ್ಯೋತಿ ಬಾಪುಲೆ ರಾಜ್ಯ ಪ್ರಶಸ್ತಿಗೆ ಭಾಜನರಾಗಿದ್ದಾರೆ.
ಇವರು ವೃತ್ತಿಯಲ್ಲಿ ಸರ್ಕಾರಿ ಶಾಲಾ ಶಿಕ್ಷಕರಾಗಿದ್ದು ಪ್ರಸ್ತುತ ಆಲೂರು ತಾಲ್ಲೂಕಿನ ಬ್ಯಾಬ ಕಾಲೋನಿ-1ಯ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಯಲ್ಲಿ ಶಿಕ್ಷಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ.
ಇವರು ಶಿಕ್ಷಣ ಕ್ಷೇತ್ರದಲ್ಲಿ ಸಲ್ಲಿಸಿರುವ ಸೇವೆಯನ್ನು ಪರಿಗಣಿಸಿ ಇದೇ ಫೆಬ್ರವರಿ 28ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆಯುವ ರಾಜ್ಯ ಮಟ್ಟದ ಶೈಕ್ಷಣಿಕ ಮಹಾ ಸಮ್ಮೇಳನದಲ್ಲಿ ಮುಖ್ಯ ಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ, ಹಾಗೂ ಶಿಕ್ಷಣ ಸಚಿವ ಮಧು ಬಂಗಾರಪ್ಪ ಪ್ರಶಸ್ತಿ ಪ್ರಧಾನ ಮಾಡುವರು.
ಪ್ರಶಸ್ತಿ ಪುರಸ್ಕೃತರನ್ನು ಹಾಸನ ಜಿಲ್ಲಾ ಚುಟುಕು ಸಾಹಿತ್ಯ ಪರಿಷತ್ ಅಧ್ಯಕ್ಷ ನಾಡಶ್ರೀ ಬಾ ನಂ ಲೋಕೇಶ ಹಾಗೂ ಚುಟುಕು ಸಾಹಿತ್ಯ ಪರಿಷತ್ತಿನ ಎಲ್ಲ ತಾಲ್ಲೂಕಿನ ಅಧ್ಯಕ್ಷರು, ಪದಾಧಿಕಾರಿಗಳು ಅಭಿನಂದಿಸಿದ್ದಾರೆ.
