ಬೆಂಗಳೂರು : ಬೆಂಗಳೂರಿನ ಭರವಸೆ ಸಂಸ್ಥೆಯೊಂದಿಗೆ ಇಒಎಕ್ಸ್ ವಾಂಟೇಜ್ CSR ಸಹಕಾರದೊಂದಿಗೆ ಬಿಡದಿ ಸಮೀಪದ ನಿಂಗೆಗೌಡನಹಳ್ಳಿ ಗ್ರಾಮದ ಸರ್ಕಾರಿ ಶಾಲೆಯ ವಿದ್ಯಾರ್ಥಿಗಳ ಡಿಜಿಟಲ್ ಶಿಕ್ಷಣವನ್ನು ಉತ್ತೇಜಿಸುವ ಉದ್ದೇಶದಿಂದ ಭರವಸೆ (Bharavase) ಸಂಸ್ಥೆ, Eox Vantage ಸಂಸ್ಥೆಯ CSR ಸಹಕಾರದೊಂದಿಗೆ ಕಂಪ್ಯೂಟರ್ ವ್ಯವಸ್ಥೆಗಳನ್ನು ಶಾಲೆಗೆ ವಿತರಿಸಿತು.
ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೂ ತಂತ್ರಜ್ಞಾನ ಆಧಾರಿತ ಶಿಕ್ಷಣ ಸಿಗಬೇಕು ಎಂಬ ಆಶಯದಿಂದ ಈ ಕಾರ್ಯಕ್ರಮವನ್ನು ಆಯೋಜಿಸಲಾಯಿತು. ಶಾಲೆಯಲ್ಲಿ ಸುಮಾರು 40ಕ್ಕೂ ಹೆಚ್ಚು ವಿದ್ಯಾರ್ಥಿಗಳು ವಿದ್ಯಾಭ್ಯಾಸ ಮಾಡುತ್ತಿದ್ದು, ಕಂಪ್ಯೂಟರ್ ಸೌಲಭ್ಯಗಳ ಕೊರತೆಯಿಂದ ಡಿಜಿಟಲ್ ಕಲಿಕೆಯಲ್ಲಿ ಹಿಂದುಳಿದಿದ್ದರು. ಇದೀಗ ನೀಡಲಾದ ಕಂಪ್ಯೂಟರ್ ವ್ಯವಸ್ಥೆಗಳು ವಿದ್ಯಾರ್ಥಿಗಳಲ್ಲಿ ಹೊಸ ಉತ್ಸಾಹವನ್ನು ಮೂಡಿಸಿ, ಕಲಿಕೆಯನ್ನು ಇನ್ನಷ್ಟು ಪರಿಣಾಮಕಾರಿಯಾಗಿ ಮಾಡಲಿವೆ.

ಈ ಸಂದರ್ಭದಲ್ಲಿ ಮಾತನಾಡಿದ ಭರವಸೆ ಸಂಸ್ಥೆಯ ಪ್ರತಿನಿಧಿಗಳು, “ಗ್ರಾಮೀಣ ಮಕ್ಕಳಿಗೂ ನಗರ ಮಟ್ಟದ ಶಿಕ್ಷಣದ ಅವಕಾಶಗಳು ದೊರಕಬೇಕು. ಡಿಜಿಟಲ್ ಶಿಕ್ಷಣವು ಇಂದಿನ ಕಾಲದ ಅಗತ್ಯವಾಗಿದ್ದು, ವಿದ್ಯಾರ್ಥಿಗಳ ಭವಿಷ್ಯ ನಿರ್ಮಾಣಕ್ಕೆ ಮಹತ್ವದ ಪಾತ್ರ ವಹಿಸುತ್ತದೆ” ಎಂದು ತಿಳಿಸಿದರು.
CSR ಸಹಕಾರ ನೀಡಿದ Eox Vantage ಸಂಸ್ಥೆಯ ಸಾಮಾಜಿಕ ಹೊಣೆಗಾರಿಕೆಯ ಕಾರ್ಯವನ್ನು ಶಾಲೆಯ ಶಿಕ್ಷಕರು ಹಾಗೂ ಗ್ರಾಮಸ್ಥರು ಪ್ರಶಂಸಿಸಿ ಕೃತಜ್ಞತೆ ಸಲ್ಲಿಸಿದರು. ಮುಂದಿನ ದಿನಗಳಲ್ಲಿಯೂ ಶಿಕ್ಷಣ, ಆರೋಗ್ಯ ಹಾಗೂ ಸಮಾಜಮುಖಿ ಕಾರ್ಯಕ್ರಮಗಳನ್ನು ಮುಂದುವರಿಸುವುದಾಗಿ ಭರವಸೆ ಸಂಸ್ಥೆಯ ಸುನಿಲ್ ಕುಮಾರ್ ತಿಳಿಸಿದ್ದಾರೆ.
