ಕೆ.ಆರ್.ಪೇಟೆ,ಜೂ.01: ತಾಲ್ಲೂಕು ಕಾಂಗ್ರೆಸ್ ಪಕ್ಷದ ವತಿಯಿಂದ ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಚೆಲುವರಾಯಸ್ವಾಮಿ ಅವರ ಹುಟ್ಟು ಹಬ್ಬದ ಅಂಗವಾಗಿ ಕರ್ನಾಟಕ ಸರ್ಕಾರದ ಕೈಮಗ್ಗ ಅಭಿವೃದ್ಧಿ ನಿಗಮದ ಅಧ್ಯಕ್ಷ ಬಿ.ನಾಗೇಂದ್ರಕುಮಾರ್, ಮಾಜಿ ಶಾಸಕ ಕೆ.ಬಿ.ಚಂದ್ರಶೇಖರ್ ನೇತೃತ್ವದಲ್ಲಿ ಕೆ.ಆರ್.ಪೇಟೆ ಪಟ್ಟಣದ ದುಂಡಶೆಟ್ಟಿ- ಲಕ್ಷ್ಮಮ್ಮ ಸ್ಮಾರಕ ತಾಲ್ಲೂಕು ಸರ್ಕಾರಿ ಆಸ್ಪತ್ರೆಯಲ್ಲಿ ದಾಖಲಾಗಿರುವ ಎಲ್ಲಾ ಒಳರೋಗಿಗಳಿಗೆ ಹಣ್ಣು-ಹಂಪಲು ವಿತರಣೆ ಮಾಡಿ ಬೇಗ ಗುಣಮುಖರಾಗುವಂತೆ ಹಾರೈಸಲಾಯಿತು.
ಈ ವೇಳೆ ಮಾತನಾಡಿದ ಕರ್ನಾಟಕ ಸರ್ಕಾರದ ಕೈಮಗ್ಗ ಅಭಿವೃದ್ಧಿ ನಿಗಮದ ಅಧ್ಯಕ್ಷ ಬಿ.ನಾಗೇಂದ್ರಕುಮಾರ್ ಅವರು ಕರ್ನಾಟಕ ಸರ್ಕಾರದ ಕೃಷಿ ಸಚಿವರಾಗಿ ಸುಮಾರು 3ವರ್ಷಗಳ ಕಾಲ ಕೆಲಸ ಉತ್ತಮವಾಗಿ ಕೆಲಸ ಮಾಡುತ್ತಿರುವ ನಮ್ಮೆಲ್ಲರ ನೆಚ್ಚಿನ ನಾಯಕರು, ಕ್ರಿಯಾಶೀಲ ಮಂತ್ರಿಗಳಾದ ಎನ್.ಚೆಲುವರಾಯಸ್ವಾಮಿ ಅವರ ನೇತೃತ್ವದಲ್ಲಿ ನಡೆದಿರುವ ಡಿಸಿಸಿ ಬ್ಯಾಂಕ್ ಚುನಾವಣೆ, ಮಂಡ್ಯ ಜಿಲ್ಲಾ ಹಾಲು ಒಕ್ಕೂಟದ ಚುನಾವಣೆ, ಪದವೀಧರರ ಕ್ಷೇತ್ರದ ವಿಧಾನಪರಿಷತ್ ಚುನಾವಣೆ, ಸ್ಥಳೀಯ ಸಂಸ್ಥೆಗಳಿಂದ ನಡೆದ ವಿಧಾನ ಪರಿಷತ್ ಚುನಾವಣೆ ಎಲ್ಲಾ ಚುನಾವಣೆಗಳಲ್ಲಿಯೂ ಕಾಂಗ್ರೆಸ್ ಪಕ್ಷವು ಭರ್ಜರಿ ಗೆಲುವು ಸಾಧಿಸಿದೆ.

ಇದು ಚೆಲುವರಾಯಸ್ವಾಮಿ ಅವರು ಜಿಲ್ಲಾಧ್ಯಂತ ಕಾಂಗ್ರೆಸ್ ಕಾರ್ಯಕರ್ತರು ಮತ್ತು ಮುಖಂಡರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಪಕ್ಷವನ್ನು ಮುನ್ನಡೆಸುತ್ತಿರುವುದಕ್ಕೆ ಸಾಕ್ಷಿಯಾಗಿದೆ. ಇದೇ ರೀತಿ ಮುಂಬರುವ ಜಿ.ಪಂ, ತಾ.ಪಂ, ಗ್ರಾ.ಪಂ ಹಾಗೂ ನಗರಸಭೆ, ಪುರಸಭೆ ಚುನಾವಣೆಗಳಲ್ಲಿಯೂ ಕಾಂಗ್ರೆಸ್ ಪಕ್ಷವು ಮೇಲುಗೈ ಸಾಧಿಸುವುದರಲ್ಲಿ ಅನುಮಾನವೇ ಇಲ್ಲ ಇಂತಹ ದಕ್ಷ ನಾಯಕತ್ವವನ್ನು ಹೊಂದಿರುವ ಎನ್.ಚೆಲುವರಾಯಸ್ವಾಮಿ ಅವರಿಂದ ಮಂಡ್ಯ ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷವು ಉತ್ತಮ ನೆಲೆಗಟ್ಟನ್ನು ಹೊಂದಿದೆ. ಯಾವುದೇ ಕಾರ್ಯಕರ್ತರು ಅವರ ಬಳಿ ಹೋಗಲಿ ಅವರ ಕಷ್ಟ ಸುಖಗಳನ್ನು ಆಲಿಸುವ ಮೂಲಕ ಕಾರ್ಯಕರ್ತರ ವಿಶ್ವಾಸವನ್ನು ಗಳಿಸಿರುವ ಚೆಲುವರಾಯಸ್ವಾಮಿ ಅವರಿಗೆ ಆ ದೇವರು ಆಯಸ್ಸು, ಆರೋಗ್ಯವನ್ನು ನೀಡಿ ಜಿಲ್ಲೆಯ ಸಮಗ್ರ ಅಭಿವೃದ್ಧಿ ಮತ್ತಷ್ಟು ಕೆಲಸ ಮಾಡುವ ಶಕ್ತಿಯನ್ನು ನೀಡಲಿ ಎಂದು ದೇವರಲ್ಲಿ ಪ್ರಾರ್ಥಿಸಿದರು.

ನುಡಿದಂತೆ ನಡೆದ ಸಿದ್ದರಾಮಯ್ಯ: ಸುಮಾರು 8ವರ್ಷಗಳ ನಾಡಿನ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದ ಎಲ್ಲಾ ವರ್ಗಗಳಿಗೂ ಸಾಮಾಜಿಕ ನ್ಯಾಯವನ್ನು ಕಲ್ಪಿಸಿದ ಸಿದ್ದರಾಮಯ್ಯ ಅವರು 2023ರಲ್ಲಿ ಎರಡನೇ ಭಾರಿಗೆ ಮುಖ್ಯಮಂತ್ರಿ ಹುದ್ದೆ ಅಲಂಕರಿಸುವಾಗ ಕೊಟ್ಟಮಾತಿನಿಂದ ರಾಜೀನಾಮೆ ಸಲ್ಲಿಸುವ ಮೂಲಕ ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್ ಅವರಿಗೆ ಮುಖ್ಯಮಂತ್ರಿ ಸ್ಥಾನವನ್ನು ಬಿಟ್ಟು ಕೊಡುವ ಮೂಲಕ ಇಡೀ ದೇಶದಲ್ಲಿ ಮಾದರಿ ರಾಜಕಾರಣಿ ಎಂಬ ಕೀರ್ತಿ ಭಾಜನರಾಗಿದ್ದಾರೆ. ಜೂ.3ರಂದು ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ ಮಾಡುತ್ತಿರುವ ಡಿ.ಕೆ.ಶಿವಕುಮಾರ್ ಅವರೂ ಸಹ ಯಶಸ್ವಿಯಾಗಿ ರಾಜ್ಯವನ್ನು ಮುನ್ನಡೆಸುವ ಮೂಲಕ ಎಲ್ಲರ ವಿಶ್ವಾಸವನ್ನು ಗಳಿಸಿ 2028ಕ್ಕೂ ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ಅವರ ನೇತೃತ್ವದಲ್ಲಿ ಚುನಾವಣೆ ಎದುರಿಸಿ ಕಾಂಗ್ರೆಸ್ ಪಕ್ಷವು ಮತ್ತೊಮ್ಮೆ ಅಧಿಕಾರಕ್ಕೆ ಬರುವುದು ಖಚಿತ ಎಂದು ಬಿ.ನಾಗೇಂದ್ರಕುಮಾರ್ ವಿಶ್ವಾಸ ವ್ಯಕ್ತಪಡಿಸಿದರು. ಜೂ.03ರಂದು ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಡಿ.ಕೆ.ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸುತ್ತಿರು ಕಾರಣ, ಅಂದು ಸಂಜೆ 4 ಗಂಟೆಗೆ ಕೆ.ಆರ್.ಪೇಟೆ ಪಟ್ಟಣದ ಪ್ರವಾಸಿ ಮಂದಿರ ವೃತ್ತದಲ್ಲಿ ವಿಜಯೋತ್ಸವ ಆಚರಿಸಲಾಗುವುದು ಎಲ್ಲಾ ಕಾರ್ಯಕರ್ತರು ಹೆಚ್ಚಿನ ಬರುವಂತೆ ಮನವಿ ಮಾಡಿದರು.

ಈ ಸಂದರ್ಭದಲ್ಲಿ ಮಾಜಿ ಶಾಸಕ ಕೆ.ಬಿ.ಚಂದ್ರಶೇಖರ್, ಟಿಎಪಿಸಿಎಂಎಸ್ ಮಾಜಿ ಅಧ್ಯಕ್ಷ ಬಿ.ಎಲ್.ದೇವರಾಜು, ಆಡಳಿತ ವೈದ್ಯಾಧಿಕಾರಿ ಡಾ.ಮಂಜುಳಾ, ಕೆಪಿಸಿಸಿ ಸದಸ್ಯ ಕಿಕ್ಕೇರಿ ಸುರೇಶ್, ಕೆ.ಯು.ಐ.ಡಿ.ಎಫ್.ಸಿ ನಿಗಮದ ಮಾಜಿ ಅಧ್ಯಕ್ಷ ಎಂ.ಡಿ.ಕೃಷ್ಣಮೂರ್ತಿ, ಪಿ.ಎಲ್.ಡಿ ಬ್ಯಾಂಕ್ ಮಾಜಿ ಅಧ್ಯಕ್ಷ ಅಘಲಯ ಎ.ಎಸ್ ರಮೇಶ್, ತಾಲ್ಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಎ.ಬಿ.ಕುಮಾರ್, ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಟಿ.ಎನ್.ದಿವಾಕರ್, ಪುರಸಭಾ ಸದಸ್ಯ ಡಿ.ಪ್ರೇಮಕುಮಾರ್, ಜಿಲ್ಲಾ ಮಹಿಳಾ ಕಾಂಗ್ರೆಸ್ ಉಪಾಧ್ಯಕ್ಷೆ ಆದಿಹಳ್ಳಿ ಮೀನಾಕ್ಷಿರಮೇಶ್, ಆರೋಗ್ಯ ರಕ್ಷಾ ಸಮಿತಿ ಸದಸ್ಯರಾದ ಹೆತ್ತಗೋನಹಳ್ಳಿ ನಾರಾಯಣಗೌಡ, ಮುಖಂಡರಾದ ಬಸ್ತಿ ರಂಗಪ್ಪ, ಕೆ.ಕೆ.ರಮೇಶ್, ಲಕ್ಷ್ಮೀಪುರ ಚಂದ್ರೇಗೌಡ, ಎಂ.ಆರ್.ಮಂಜೇಗೌಡ, ಭತ್ತದ ವ್ಯಾಪಾರಿ ವೆಂಕಟರಾಮೇಗೌಡ, ತಾಲ್ಲೂಕು ಮಹಿಳಾ ಕಾಂಗ್ರೆಸ್ ಅಧ್ಯಕ್ಷರಾದ ಲೋಲಾಕ್ಷಿಜಗದೀಶ್, ವಿನೂತಸುರೇಶ್, ನೇತ್ರರಮೇಶ್, ಶಿವಮ್ಮ, ಆಕಾಶ್, ಶಿವಣ್ಣ, ಬಳ್ಳೇಕೆರೆ ವಿಜಯ್ಕುಮಾರ್, ಇಲಿಯಾಷ್ ಪಾಷಾ, ಕೆ.ಡಿ.ಪಿ ಸದಸ್ಯ ಆಕಾಶ್, ಇಲ್ಯಾಸ್ ಅಹಮದ್ ಮತ್ತಿತರರು ಉಪಸ್ಥಿತರಿದ್ದರು.
– ಶ್ರೀನಿವಾಸ್ ಆರ್.
