
ಹಾಸನ: ಬೇಲೂರು ತಾಲ್ಲೂಕಿನ ರಾಮದೇವರಹಳ್ಳಿ ಹಳ್ಳದ ನೀರಿನಲ್ಲಿ ದೈತ್ಯಾಕಾರದ ಹುಲಿ ಮೃತದೇಹ ಪತ್ತೆಯಾಗಿದೆ.
ಹುಲಿ ಸಾವಿಗೆ ನಿಖರ ಕಾರಣ ತಿಳಿದು ಬಂದಿಲ್ಲ.
ನೀರಿನಲ್ಲಿ ಸತ್ತು ಬಿದ್ದಿರುವ ಹುಲಿಯನ್ನು ಕಂಡು ಸ್ಥಳೀಯರು ಮರುಕ ವ್ಯಕ್ತಪಡಿಸಿದ್ದಾರೆ.
ಸ್ಥಳೀಯರು ಹಳ್ಳದ ಕಡೆಗೆ ಹೋದಾಗ ಘಟನೆ ಬೆಳಕಿಗೆ ಬಂದಿದೆ.
ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಬೇಲೂರು ಗ್ರಾಮಾಂತರ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.