
ಚಿತ್ರದುರ್ಗ :ಉಪ ಸಭಾಪತಿ ಶ್ರೀ ರುದ್ರಪ್ಪ ಲಮಾಣಿ ರವರು ಕಲಾಪವನ್ನು ಮುಗಿಸಿ ಹಾವೇರಿ ಜಿಲ್ಲೆಯ ಸ್ವಗ್ರಾಮಕ್ಕೆ ಹೋಗುವಾಗ ರಸ್ತೆ ಅಪಘಾತವಾಗಿದ್ದು, ಶಾಸಕರು ಗಾಯಗೊಂಡ ಘಟನೆ ಚಿತ್ರದುರ್ಗ ಜಿಲ್ಲೆಯ ಜೆಜಿ ಹಳ್ಳಿ ಸಮೀಪ ಶುಕ್ರವಾರ ಸಂಜೆ ನಡೆದಿದೆ.
ಕರ್ನಾಟಕ ವಿಧಾನಸಭಾ ಉಪ ಸಭಾಪತಿ ರುದ್ರಪ್ಪ ಲಮಾಣಿ ಅಧಿವೇಶನ ಮುಗಿಸಿ ಸ್ವಗ್ರಾಮದತ್ತ ಕಾರಿನಲ್ಲಿ ತೆರಳುತ್ತಿದ್ದ ಸಂದರ್ಭದಲ್ಲಿ, ಕಲಾಪವನ್ನು ಮುಗಿಸಿ ಹಾವೇರಿ ಜಿಲ್ಲೆಯ ಸ್ವಗ್ರಾಮಕ್ಕೆ ಹೋಗುವಾಗ ಈ ಘಟನೆ ನಡೆದಿದೆ. ಬಹಿರ್ದೇಸೆಗೆಂದು ಮಾರ್ಗ ಮಧ್ಯ ಕಾರಿನಿಂದ ಇಳಿಯುತ್ತಿದ್ದ ವೇಳೆ ಬೈಕ್ ಸವಾರನೊಬ್ಬ ಡಿಕ್ಕಿ ಹೊಡೆದಿದ್ದು, ಡಿಕ್ಕಿ ಹೊಡೆದ ರಭಸಕ್ಕೆ ನೆಲಕ್ಕೆ ಬಿದ್ದ ರುದ್ರಪ್ಪ ಲಮಾಣಿ ಅವರ ಹಣೆ, ಹಲ್ಲು ಮತ್ತು ಬಲ ಮೊಣಕಾಲಿಗೆ ಗಾಯವಾಗಿದೆ. ಈ ಘಟನೆ ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಜವನಗೊಂಡನಹಳ್ಳಿಯ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಸಂಭವಿಸಿದ್ದು, ತಕ್ಷಣ ಹಿರಿಯೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು, ದಾವಣಗೆರೆ ದೊಡ್ಡ ಆಸ್ಪತ್ರೆಗೆ ತೆರಳಿದ್ದಾರೆ.