
ಹಾಸನ ತಾಲ್ಲೂಕು ದೇವಿಹಳ್ಳಿ ಗ್ರಾಮದಲ್ಲಿ ಇತ್ತೀಚೆಗೆ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಹೊತ್ತಿಕೊಂಡು ಮನೆ ಹಾಗೂ ಗೃಹ ಬಳಕೆ ವಸ್ತುಗಳನ್ನು ಕಳೆದುಕೊಂಡ ದಿನೇಶ್ ಎಂಬ ರೈತರ ಮನೆಗೆ ಇಂದು ಸಂಸದ ಶ್ರೇಯಸ್ ಪಟೇಲ್ ಭೇಟಿ ನೀಡಿ ಪರಿಶೀಲನೆ ನಡೆಸಿ ಸಾಂತ್ವನ ಹೇಳಿದರು.
ಅಗ್ನಿ ಅವಘಡದಿಂದ ಅಪಾರ ಪ್ರಮಾಣದ ನಷ್ಟ ಸಂಭವಿಸಿದ್ದು, ನೊಂದ ಬಡ ಕುಟುಂಬಕ್ಕೆ ಸರ್ಕಾರದಿಂದ ಬರುವ ಪರಿಹಾರವನ್ನು ಶೀಘ್ರ ತಲುಪಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.