ಹಾಸನ: ಕೆ.ಸಿ.ಪಿ. ಗ್ರೂಪ್ಸ್ ಮಾಲೀಕ ಹೆಚ್.ಪಿ. ಕಿರಣ್ ಗೌಡ ಅವರು ಸರ್ಕಾರಿ ಶಾಲಾ ಮಕ್ಕಳ ಕಲಿಕೆಗೆ ಪ್ರೋತ್ಸಾಹ ನೀಡುವ ಉದ್ದೇಶದಿಂದ ಡೆಸ್ಕ್ಗಳು ಹಾಗೂ ಕುಡಿಯುವ ನೀರಿನ ಬಾಟಲ್ಗಳನ್ನು ವಿತರಿಸಿದರು.
ನವೆಂಬರ್ 22ರಂದು ಕೆ. ಹೊಸಕೊಪ್ಪಲಿನ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಹಾಗೂ ಬೊಮ್ಮನಾಯಕನಹಳ್ಳಿಯ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ಕುಳಿತು ಓದಲು ಮತ್ತು ಬರೆಯಲು ಅನುಕೂಲವಾಗುವ ಡೆಸ್ಕ್ಗಳು ಹಾಗೂ ನೀರಿನ ಬಾಟಲ್ಗಳನ್ನು ವಿತರಿಸಿ ಶುಭ ಹಾರೈಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಹೆಚ್.ಪಿ. ಕಿರಣ್ ಗೌಡ, ವಿದ್ಯಾರ್ಥಿಗಳು ಕೆಟ್ಟ ಅಭ್ಯಾಸಗಳಿಂದ ದೂರವಿದ್ದು, ವಿದ್ಯಾಭ್ಯಾಸಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು. ಮಕ್ಕಳು ಉತ್ತಮ ಶಿಕ್ಷಣ ಪಡೆದು ಸಾಧನೆ ಮಾಡಿದರೆ ವೈಯಕ್ತಿಕ ಅಭಿವೃದ್ಧಿಯ ಜೊತೆಗೆ ದೇಶದ ಪ್ರಗತಿಯೂ ಸಾಧ್ಯವಾಗುತ್ತದೆ ಎಂದರು.
ಹಾಸನ ಜಿಲ್ಲೆಯ ವಿದ್ಯಾರ್ಥಿಗಳು ಉನ್ನತ ಶಿಕ್ಷಣ ಪಡೆದು ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡುವ ಮೂಲಕ ಜಿಲ್ಲೆಗೆ ಕೀರ್ತಿ ತರಬೇಕು. ಮುಂದಿನ ದಿನಗಳಲ್ಲಿ ಯಾವುದೇ ಸಮಸ್ಯೆಗಳು ಎದುರಾದರೂ ಧೈರ್ಯದಿಂದ ಎದುರಿಸೋಣ, ನಿಮ್ಮೊಂದಿಗೆ ನಾನಿರುತ್ತೇನೆ ಎಂದು ಮಕ್ಕಳಿಗೆ ಆತ್ಮಸ್ಥೈರ್ಯ ತುಂಬಿದರು.
ಕಾರ್ಯಕ್ರಮದಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆಯ ಸಂಪನ್ಮೂಲ ಅಧಿಕಾರಿ ಚಂದ್ರಕಾಂತ್, ಶಾಲೆಗಳ ಮುಖ್ಯೋಪಾಧ್ಯಾಯರಾದ ಲಿಲ್ಲಿ ಮೇರಿ, ಶಿವಕುಮಾರ್, ಶಿಕ್ಷಕರು, ಪೋಷಕರು, ಗ್ರಾಮಸ್ಥರು ಉಪಸ್ಥಿತರಿದ್ದರು.
ಶಾಲೆಗಳ ಮುಖ್ಯೋಪಾಧ್ಯಾಯರು ಹಾಗೂ ಶಿಕ್ಷಕರು ದಾನಿ ಕಿರಣ್ ಗೌಡ ಅವರನ್ನು ಸನ್ಮಾನಿಸಿ ಕೃತಜ್ಞತೆ ಸಲ್ಲಿಸಿದರು.
