80ನೇ ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ರೋಟರಿ ಕ್ಲಬ್ ಆಫ್ ಹಾಸನ್ ಸನ್ ರೈಸ್, ಲಯನ್ಸ್ ಕ್ಲಬ್ ಹಾಸನಾಂಬ ಹಾಗೂ ಆಲ್ ಇಂಡಿಯಾ ಡೆಮಾಕ್ರೆಟಿಕ್ ಸ್ಟೂಡೆಂಟ್ಸ್ ಆರ್ಗನೈಸೇಶನ್ (AIDSO) ಸಂಯುಕ್ತ ಆಶ್ರಯದಲ್ಲಿ ಎರಡು ದಿನಗಳ ಜಿಲ್ಲಾಮಟ್ಟದ ವ್ಯಕ್ತಿತ್ವ ವಿಕಸನ ಶಿಬಿರ ಆಯೋಜಿಸಲಾಗಿದೆ.
📍 ಹಾಸನದ ಸಾಲಗಾಮೆ ರಸ್ತೆಯ ಸರಸ್ವತಿ ದೇವಸ್ಥಾನದ ಎದುರಿರುವ AIDSO ಜಿಲ್ಲಾ ಕಚೇರಿಯಲ್ಲಿ ಆಗಸ್ಟ್ 15 ಮತ್ತು 16ರಂದು ನಡೆಯುತ್ತಿರುವ ಶಿಬಿರದ ಮೊದಲ ದಿನ ವಿವಿಧ ಕಾಲೇಜುಗಳ ವಿದ್ಯಾರ್ಥಿಗಳು ಭಾಗವಹಿಸಿದ್ದರು.
ಕಾರ್ಯಕ್ರಮದಲ್ಲಿ ಬೆಂಗಳೂರಿನ ಸಂಪನ್ಮೂಲ ವ್ಯಕ್ತಿಗಳು ವಿದ್ಯಾರ್ಥಿಗಳಿಗೆ ವ್ಯಕ್ತಿತ್ವ ವಿಕಸನ, ಆತ್ಮವಿಶ್ವಾಸ, ನಾಯಕತ್ವ ಗುಣಗಳು ಹಾಗೂ ವೈಯಕ್ತಿಕ ಸಾಮರ್ಥ್ಯ ವೃದ್ಧಿ ಸೇರಿದಂತೆ ಹಲವು ವಿಷಯಗಳ ಕುರಿತು ಮಾರ್ಗದರ್ಶನ ನೀಡಿದರು.
ವೇದಿಕೆಯಲ್ಲಿ ರೋಟರಿ ಕ್ಲಬ್ ಆಫ್ ಹಾಸನ್ ಸನ್ ರೈಸ್ ಅಧ್ಯಕ್ಷರಾದ ರೋ. ಕೆ.ಎಸ್. ಯೋಗೇಶ್, ಲಯನ್ಸ್ ಕ್ಲಬ್ ಹಾಸನಾಂಬ ಅಧ್ಯಕ್ಷರಾದ ಕೆ.ಕೆ. ಮೋಹನ್ ಕುಮಾರ್, ರೋಟರಿ ಕ್ಲಬ್ನ ಐಟಿ ಮತ್ತು ವೆಬ್ಸೈಟ್ ಚೇರ್ಮನ್ ರೋ. ಸುಬ್ರಮಣ್ಯ, ಸದಸ್ಯರಾದ ರೋ. ಚಂದ್ರೇಗೌಡ ಸೇರಿದಂತೆ ಹಲವು ಗಣ್ಯರು ಹಾಗೂ ಸಂಘಟನೆಗಳ ಸದಸ್ಯರು ಉಪಸ್ಥಿತರಿದ್ದರು.
🎓 ವಿದ್ಯಾರ್ಥಿಗಳಲ್ಲಿ ಆತ್ಮವಿಶ್ವಾಸ, ನಾಯಕತ್ವ ಮತ್ತು ವ್ಯಕ್ತಿತ್ವ ಬೆಳೆಸುವ ಉದ್ದೇಶದೊಂದಿಗೆ ಶಿಬಿರ ಆಯೋಜಿಸಲಾಗಿದೆ.
