ಹಾಸನ : ಸಮಾಜಸೇವಕರಾದ ಡಾ. ವೈ.ಎಸ್. ವೀರಭದ್ರಪ್ಪ ಅವರ ಕೃತಿ ಬಿಡುಗಡೆ ಹಾಗೂ ಸನ್ಮಾನ ಸಮಾರಂಭವನ್ನು ಯಶಸ್ವಿಯಾಗಿ ಆಯೋಜಿಸುವ ಕುರಿತು ಜೂನ್ 18ರಂದು ಹಾಸನದ ಆದಿಚುಂಚನಗಿರಿ ಕಲ್ಯಾಣ ಮಂಟಪದ ಯಾಗ ಸಭಾಂಗಣದಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಸರ್ವಾನುಮತದಿಂದ ತೀರ್ಮಾನಿಸಲಾಯಿತು.

ಸಭೆಯಲ್ಲಿ ಮಾತನಾಡಿದ ಮುಖಂಡರು, ಹಲವಾರು ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸಿರುವ ಡಾ. ವೈ.ಎಸ್. ವೀರಭದ್ರಪ್ಪ ಅವರು ಸರಳ ವ್ಯಕ್ತಿತ್ವದ ಮೂಲಕ ಸಮಾಜದಲ್ಲಿ ವಿಶಿಷ್ಟ ಛಾಪು ಮೂಡಿಸಿರುವ ವ್ಯಕ್ತಿಯಾಗಿದ್ದು, ಹಾಸನ ಜಿಲ್ಲಾ ಕೇಂದ್ರದಲ್ಲಿ ವಿವಿಧ ಸಾಮಾಜಿಕ ಚಟುವಟಿಕೆಗಳ ಮೂಲಕ ಜನಸೇವೆ ಮಾಡಿದ್ದಾರೆ ಎಂದು ಪ್ರಶಂಸಿಸಿದರು.

ಡಾ. ವೀರಭದ್ರಪ್ಪ ಅವರ ಕೃತಿ ಬಿಡುಗಡೆ ಹಾಗೂ ಸನ್ಮಾನ ಸಮಾರಂಭವು ಜುಲೈ 12, 2026ರಂದು ಭಾನುವಾರ ಹಾಸನದ ಶ್ರೀ ಆದಿಚುಂಚನಗಿರಿ ಕಲ್ಯಾಣ ಮಂಟಪದಲ್ಲಿ ನಡೆಯಲಿದೆ. ಸಮಾರಂಭದ ಸಾನಿಧ್ಯವನ್ನು ಮೈಸೂರಿನ ಸುತ್ತೂರು ಮಠದ ಜಗದ್ಗುರು ಶ್ರೀ ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮೀಜಿ ವಹಿಸಲಿದ್ದು, ರಾಜ್ಯ ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠದ ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ, ಕೋಡಿಮಠದ ಶ್ರೀ ಶಿವಾನಂದ ಶಿವಯೋಗಿ ರಾಜೇಂದ್ರ ಮಹಾಸ್ವಾಮೀಜಿ, ಹಾಸನ ಆದಿಚುಂಚನಗಿರಿ ಶಾಖಾ ಮಠದ ಶ್ರೀ ಶಂಭುನಾಥ ಸ್ವಾಮೀಜಿ ಹಾಗೂ ತಣ್ಣೀರಹಳ್ಳ ಮಠದ ಶ್ರೀ ವಿಜಯಕುಮಾರ ಸ್ವಾಮೀಜಿ ಸಾನಿಧ್ಯ ವಹಿಸಲಿದ್ದಾರೆ.

ಮುಖ್ಯ ಅತಿಥಿಗಳಾಗಿ ಮಾಜಿ ಸಚಿವರಾದ ಪಿ.ಜಿ.ಆರ್. ಸಿಂಧ್ಯಾ ಹಾಗೂ ಜೆ.ಸಿ. ಮಾಧುಸ್ವಾಮಿ ಭಾಗವಹಿಸಲಿದ್ದು, ಕಾರ್ಯಕ್ರಮವನ್ನು ಹಾಸನ ಲೋಕಸಭಾ ಕ್ಷೇತ್ರದ ಸಂಸದರಾದ ಶ್ರೇಯಸ್ ಎಂ. ಪಟೇಲ್ ಉದ್ಘಾಟಿಸಲಿದ್ದಾರೆ. ಸಮಾರಂಭದ ಅಧ್ಯಕ್ಷತೆಯನ್ನು ಹಾಸನ ಕ್ಷೇತ್ರದ ಶಾಸಕ ಸ್ವರೂಪ್ ಪ್ರಕಾಶ್ ವಹಿಸಲಿದ್ದಾರೆ. ಹಾಸನ ಜಿಲ್ಲೆಯ ಶಾಸಕರು, ಮಾಜಿ ಶಾಸಕರು ಹಾಗೂ ವಿವಿಧ ಸಮಾಜಗಳ ಮುಖಂಡರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

ಪೂರ್ವಭಾವಿ ಸಭೆಯಲ್ಲಿ ಕಾರ್ಯಕ್ರಮವನ್ನು ಅರ್ಥಪೂರ್ಣ ಹಾಗೂ ಯಶಸ್ವಿಯಾಗಿ ನಡೆಸಲು ವಿವಿಧ ಮುಖಂಡರು ಸಲಹೆ-ಸೂಚನೆಗಳನ್ನು ನೀಡಿದರು.

ಸಭೆಯಲ್ಲಿ ಹಾಸನ ಜಿಲ್ಲಾ ವೀರಶೈವ ಲಿಂಗಾಯತ ಸಮಾಜದ ಅಧ್ಯಕ್ಷ ಬಿ.ಪಿ. ಐಸ್ವಾಮಿ ಗೌಡ, ಜಿಲ್ಲಾ ಒಕ್ಕಲಿಗರ ಸಂಘದ ಸಹ ಕಾರ್ಯದರ್ಶಿ ಡಾ. ಡಿ.ಸಿ. ಅರವಿಂದ್, ಮಾಜಿ ನಗರಸಭೆ ಅಧ್ಯಕ್ಷ ಜಿ.ಟಿ. ಕುಮಾರ್, ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾ ಅಧ್ಯಕ್ಷ ಎಚ್.ಎಲ್. ಮಲ್ಲೇಶ್ ಗೌಡ, ಜಿಲ್ಲಾ ಪತ್ರಕರ್ತರ ಸಂಘದ ಮಾಜಿ ಅಧ್ಯಕ್ಷ ನಾ. ಕಲಗೋಡು ರವಿ, ಉದಯ ರವಿ, ಪತ್ರಕರ್ತ ಆರ್.ಪಿ. ವೆಂಕಟೇಶ್ ಮೂರ್ತಿ, ತಾಲೂಕು ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಅಧ್ಯಕ್ಷ ಕಟ್ಟಾಯ ಶಿವಕುಮಾರ್, ನಿವೃತ್ತ ತಹಶೀಲ್ದಾರ್ ರುದ್ರಪ್ಪ ಜಿ. ರಾವ್, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷ ನಾಯಕನಹಳ್ಳಿ ಮಂಜೇಗೌಡ, ಜಿಲ್ಲಾ ಪ್ರಾಥಮಿಕ ಶಿಕ್ಷಕರ ಸಂಘದ ಅಧ್ಯಕ್ಷ ಕೃಷ್ಣಮೂರ್ತಿ, ಜಿಲ್ಲಾ ಪತ್ರಕರ್ತರ ಸಂಘದ ಉಪಾಧ್ಯಕ್ಷ ಅತೀಕ್ ರೆಹಮಾನ್, ಡಾ. ವೀರಭದ್ರಪ್ಪ ಅವರ ಕೃತಿ ರಚಿಸಿದ ಶಿಕ್ಷಕಿ ಬಿ.ಎಸ್. ವನಜಾಕ್ಷಿ, ಡಾ. ಸಾವಿತ್ರಿ ಸೇರಿದಂತೆ ಚಲಂ ಹಾಡ್ಲಹಳ್ಳಿ, ಪರಮಶಿವಯ್ಯ, ಜಿ.ಆರ್. ಶ್ರೀನಿವಾಸ್, ಚಿನ್ನೆನಹಳ್ಳಿ ಸ್ವಾಮಿ, ರಾಜಶೇಖರ್ ಮೂರ್ತಿ ಬಾಣಂ, ಲೋಕೇಶ್, ಪುಟ್ಟರಾಜೇಗೌಡ, ಪುಟ್ಟಸ್ವಾಮಿ, ಪ್ರಕಾಶ್, ಜಯರಮೇಶ್, ಕಾಂತರಾಜ್, ಧರ್ಪಣ ಗೋಪಾಲ್, ನಟರಾಜ್, ಶೋಭಾ ಮಹೇಶ್, ಸುಶೀಲಾ ಸೋಮಶೇಖರ್, ಪುಟ್ಟರಂಗೆಗೌಡ, ಜಯಶೀಲಮ್ಮ, ರಾಣಿ, ವಿ.ಎಸ್. ಸುಗುಣ, ಹೇಮಂತ್, ಸುಲೋಚನಾ, ಸುನಿತಾ, ಚಂದ್ರಶೇಖರ್, ಬಿ.ವಿ. ತಿಮ್ಮೇಗೌಡ ಸೇರಿದಂತೆ ಹಲವರು ಉಪಸ್ಥಿತರಿದ್ದು ಸಲಹೆಗಳನ್ನು ನೀಡಿದರು.
– ಶಿವಕುಮಾರ್ ಕಟ್ಟಾಯ.
