ಬೆಂಗಳೂರು: ನಗರದಲ್ಲಿ ಬೆಂಗಳೂರು ಸಿಟಿ ಪೊಲೀಸ್ ಭರ್ಜರಿ ಕಾರ್ಯಾಚರಣೆ ನಡೆಸಿ ಓರ್ವ ಡ್ರಗ್ ಪೆಡ್ಲರ್ನನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಯಿಂದ ಸುಮಾರು ₹3.8 ಲಕ್ಷ ಮೌಲ್ಯದ 35 ಗ್ರಾಂ ಮಾದಕ ವಸ್ತುವನ್ನು ವಶಕ್ಕೆ ಪಡೆಯಲಾಗಿದೆ.
ಪೊಲೀಸರ ಮಾಹಿತಿ ಪ್ರಕಾರ, ವಿದ್ಯಾರಣ್ಯಪುರ ಪ್ರದೇಶದ ಸ್ಮಶಾನದ ಸಮೀಪ ಮಾದಕ ವಸ್ತು ಮಾರಾಟ ಮಾಡುತ್ತಿದ್ದ ವೇಳೆ ಬಂಡೆ ಸಲ್ಮಾನ್ ಎಂಬ ಆರೋಪಿಯನ್ನು ಬಂಧಿಸಲಾಗಿದೆ. ಕಾರ್ಯಾಚರಣೆ ವೇಳೆ ಆರೋಪಿಯ ಬಳಿ ಇದ್ದ ಮಾದಕ ವಸ್ತುಗಳ ಜೊತೆಗೆ ಒಂದು ಕಾರು ಹಾಗೂ ಒಂದು ಮೊಬೈಲ್ ಫೋನ್ನ್ನೂ ಜಪ್ತಿ ಮಾಡಲಾಗಿದೆ.
ಈ ಸಂಬಂಧ ವಿದ್ಯಾರಣ್ಯಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ತನಿಖೆ ಮುಂದುವರೆಸಿದ್ದಾರೆ.
