ಹಾಸನ: ನಗರದ ಹೇಮಾವತಿ ನಗರದಲ್ಲಿರುವ ಎಲೈಟ್ ಶಾಲೆ 2025-26ನೇ ಸಾಲಿನ ಎಸ್.ಎಸ್.ಎಲ್.ಸಿ ವಾರ್ಷಿಕ ಪರೀಕ್ಷೆಯಲ್ಲಿ ಸತತ 16ನೇ ವರ್ಷವೂ 100% ಫಲಿತಾಂಶ ದಾಖಲಿಸಿ ಗಮನ ಸೆಳೆದಿದೆ.
ಪರೀಕ್ಷೆಗೆ ಹಾಜರಾಗಿದ್ದ ಒಟ್ಟು 49 ವಿದ್ಯಾರ್ಥಿಗಳಲ್ಲಿ 18 ಮಂದಿ ಅತ್ಯುನ್ನತ ಶ್ರೇಣಿಯಲ್ಲಿ, 30 ಮಂದಿ ಪ್ರಥಮ ಶ್ರೇಣಿಯಲ್ಲಿ ಹಾಗೂ 1 ವಿದ್ಯಾರ್ಥಿ ದ್ವಿತೀಯ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ.

ಶಾಲೆಯ ವಿದ್ಯಾರ್ಥಿ ಕುಶಾಲ್ ಹೆಚ್.ಸಿ 625ಕ್ಕೆ 617 ಅಂಕಗಳನ್ನು (98.72%) ಗಳಿಸಿ ಪ್ರಥಮ ಸ್ಥಾನ ಪಡೆದಿದ್ದು, ನಕ್ಷತ್ರ 625ಕ್ಕೆ 616 ಅಂಕಗಳನ್ನು (98.56%) ಪಡೆದು ಎರಡನೇ ಸ್ಥಾನ ಗಳಿಸಿದ್ದಾರೆ.

ಈ ಸಾಧನೆಯ ಮೂಲಕ ಶಾಲೆಯ ಗೌರವವನ್ನು ಹೆಚ್ಚಿಸಿದ ಎಲ್ಲಾ ವಿದ್ಯಾರ್ಥಿಗಳಿಗೆ, ಪೋಷಕರಿಗೆ ಹಾಗೂ ಬೋಧಕ-ಬೋಧಕೇತರ ಸಿಬ್ಬಂದಿಗೆ ಎಲೈಟ್ ಶಾಲೆಯ ಆಡಳಿತ ಮಂಡಳಿ ಅಭಿನಂದನೆ ಸಲ್ಲಿಸಿದೆ.
