ಕಲ್ಬುರ್ಗಿಯಲ್ಲಿ ಸರ್ಕಾರಿ ಶಾಲೆಗಳಲ್ಲಿ ನೀಡುತ್ತಿರುವ ಚಿಕ್ಕಿಯಲ್ಲಿ ಮಕ್ಕಳ ಆರೋಗ್ಯದ ಮೇಲೆ ಪರಿಣಾಮ ಬೀರುವ ಅಂಶಗಳು ಪತ್ತೆಯಾಗಿದ್ದರ ಹಿನ್ನೆಲೆಯಲ್ಲಿ ಇದೀಗ ಶಿಕ್ಷಣ ಇಲಾಖೆಯ ಇನ್ನು ಮುಂದೆ ಸರಕಾರಿ ಶಾಲೆಗಳಲ್ಲಿ ಚಿಕ್ಕಿ ವಿತರಣೆ ಇಲ್ಲ ಎಂದು ತಿಳಿಸಿದೆ.
ಹೌದು ಇನ್ಮುಂದೆ ಸರ್ಕಾರಿ ಶಾಲೆಗಳಲ್ಲಿ ಚಿಕ್ಕ ವಿತರಣೆ ಇಲ್ಲ. ಕಲ್ಬುರ್ಗಿಯಲ್ಲಿ ಮಕ್ಕಳಿಗೆ ಕೊಟ್ಟ ಚಿಕ್ಕಿ ತಿನ್ನಲು ಯೋಗ್ಯವಾಗಿರಲಿಲ್ಲ. ಮಕ್ಕಳ ಆರೋಗ್ಯದ ಮೇಲೆ ಪರಿಣಾಮ ಬೀರುವ ಅಂಶ ಇದೀಗ ಚಿಕ್ಕಿಯಲ್ಲಿ ಪತ್ತೆಯಾಗಿದೆ. ಸಕ್ಕರೆ ಅಂಶ ಹೆಚ್ಚಿನ ಮಟ್ಟದಲ್ಲಿದೆ ಎನ್ನುವ ಮಾಹಿತಿ ತಿಳಿದು ಬಂದಿದೆ. ಈ ಸಂಬಂಧ ಇಲಾಖೆ ಹೆಚ್ಚುವರಿ ಆಯುಕ್ತರು ಪತ್ರ ಬರೆದಿದ್ದರು. ಹಾಗಾಗಿ ಮಕ್ಕಳಿಗೆ ಚಿಕ್ಕಿ ವಿತರಣೆ ಮಾಡಿದರಲೂ ಶಿಕ್ಷಣ ಇಲಾಖೆ ನಿರ್ಧರಿಸಿದೆ.

Super well done cool