ಚನ್ನರಾಯಪಟ್ಟಣ: ಕರ್ನಾಟಕ ರಾಜ್ಯ ಸರ್ಕಾರದ 2026ನೇ ಸಾಲಿನ ಕರ್ನಾಟಕ ನಾಟಕ ಅಕಾಡೆಮಿ ಪ್ರಶಸ್ತಿಗೆ ಭಾಜನರಾದ ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ತಗಡೂರು ಶಿವಾನಂದ್ ಅವರನ್ನು ಚನ್ನರಾಯಪಟ್ಟಣ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು.
ಪಟ್ಟಣದ ಪತ್ರಕರ್ತರ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಕ್ರಿಯ ರಂಗಭೂಮಿ ಸೇವೆಯನ್ನು ಗುರುತಿಸಿ ರಾಜ್ಯ ಸರ್ಕಾರವು ತಗಡೂರು ಶಿವಾನಂದ್ ಅವರಿಗೆ ನಾಟಕ ಅಕಾಡೆಮಿ ಪ್ರಶಸ್ತಿ ನೀಡಿರುವುದಕ್ಕೆ ಸಂತಸ ವ್ಯಕ್ತಪಡಿಸಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಗಣ್ಯರು, ಶಿವಾನಂದ್ ಅವರು ರಂಗಭೂಮಿಯ ಜೊತೆಗೆ ಪತ್ರಕರ್ತರ ಹಿತ ಕಾಪಾಡುವ ಕಾರ್ಯದಲ್ಲಿಯೂ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ. ರಂಗಭೂಮಿ ಮತ್ತು ಪತ್ರಿಕೋದ್ಯಮ ಕ್ಷೇತ್ರಗಳನ್ನು ಜೊತೆಜೊತೆಯಾಗಿ ಮುನ್ನಡೆಸುತ್ತಿರುವ ಅವರ ಸೇವೆ ಶ್ಲಾಘನೀಯವಾಗಿದೆ. ಹಾಸನದ ರಂಗಸಿರಿ ಕಲಾತಂಡದೊಂದಿಗೂ ಗುರುತಿಸಿಕೊಂಡಿರುವ ಹಿರಿಯ ಪತ್ರಕರ್ತ ಹಾಗೂ ರಂಗಕರ್ಮಿ ಶಿವಾನಂದ್ ಅವರನ್ನು ಗೌರವಿಸುವುದು ನಮ್ಮೆಲ್ಲರ ಹೆಮ್ಮೆಯ ವಿಷಯವಾಗಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಚನ್ನರಾಯಪಟ್ಟಣ ತಾಲೂಕಿನ ತಗಡೂರು ಗ್ರಾಮದವರಾದ ಟಿ.ವಿ. ಶಿವಾನಂದ್ ಅವರಿಗೆ ತಾಲೂಕಿನ ವಿವಿಧ ಸಂಘ-ಸಂಸ್ಥೆಗಳ ಪದಾಧಿಕಾರಿಗಳು ಹಾಗೂ ಸದಸ್ಯರು ಅಭಿನಂದನೆ ಸಲ್ಲಿಸಿ ಗೌರವಿಸಿದರು.

ಕಾರ್ಯಕ್ರಮದಲ್ಲಿ ಕರ್ನಾಟಕ ರಾಜ್ಯ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಟಿ.ವಿ. ಶಿವಾನಂದ್, ಕರ್ನಾಟಕ ಸಹಕಾರ ಮಾರಾಟ ಮಂಡಳಿಯ ನಿರ್ದೇಶಕ ಸಿ.ಎನ್. ಪುಟ್ಟಸ್ವಾಮಿಗೌಡ, ಕರ್ನಾಟಕ ಮಕ್ಕಳ ಸಾಹಿತ್ಯ ಪರಿಷತ್ತಿನ ರಾಜ್ಯಾಧ್ಯಕ್ಷ ಸಿ.ಎನ್. ಅಶೋಕ್, ಕರ್ನಾಟಕ ನಾಟಕ ಅಕಾಡೆಮಿಯ ಮಾಜಿ ಸದಸ್ಯ ಚಂದ್ರು ಕಾಳೇನಹಳ್ಳಿ, ಹಾಸನದ ರಂಗಸಿರಿ ಕಲಾತಂಡದ ಕಾರ್ಯದರ್ಶಿ ಷಾಡ್ರಾಕ್, ರಂಗಕರ್ಮಿ ನಂಜುಂಡ ಮೈಮ್, ಪತ್ರಕರ್ತರ ಸಂಘದ ಮಾಜಿ ಅಧ್ಯಕ್ಷರಾದ ನಾಗೇಶ್, ಶಾಮ್ ಸುಂದರ್ ಸೇರಿದಂತೆ ಹಲವರು ಮಾತನಾಡಿದರು.

ರಂಗಭೂಮಿ ಕಲಾವಿದರಾದ ನೀನಾಸಂ ಶಿವು, ಉಮೇಶ್, ದಿಂಡಗೂರು ಸಂತೋಷ್, ಎಚ್.ಎನ್. ರಾಮಣ್ಣ, ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ದಯಾನಂದ್, ಕಾರ್ಯದರ್ಶಿ ಶ್ರೀನಿವಾಸ್, ಉಪಾಧ್ಯಕ್ಷರಾದ ಪುಟ್ಟರಾಜು, ನಂದನ್, ಸಹ ಕಾರ್ಯದರ್ಶಿ ನಾಗೇಂದ್ರ, ನಿರ್ದೇಶಕರಾದ ನಟೇಶ್, ಪಾಂಡುರಂಗ, ಪತ್ರಕರ್ತರಾದ ಶ್ಯಾಮ್ ಸುಂದರ್, ಕೆ. ಅಣ್ಣೇನಹಳ್ಳಿ, ಸಿ.ವಿ. ಲೋಹಿತ್, ಐ.ಕೆ. ಮಂಜುನಾಥ್, ಪ್ರದೀಪ್, ಗೋವಿಂದ್, ಮಂಜುನಾಥ್, ಗುರುಕಲಾ ಸಂಘದ ಅಧ್ಯಕ್ಷ ಎಚ್.ಎನ್. ರಾಮಣ್ಣ ಸೇರಿದಂತೆ ವಿವಿಧ ಕ್ಷೇತ್ರಗಳ ಗಣ್ಯರು ಉಪಸ್ಥಿತರಿದ್ದರು.
– ಮಂಜುನಾಥ್ ಐ.ಕೆ.
