ಹಾಸನ: ಕೇಂದ್ರ ಕನ್ನಡ ಸಾಹಿತ್ಯ ವೇದಿಕೆ (ರಿ.), ಬೆಂಗಳೂರಿನ ಸಂಸ್ಥಾಪಕ ಅಧ್ಯಕ್ಷರು ಹಾಗೂ ಸಾಹಿತಿ ಕೊಟ್ರೇಶ್ ಎಸ್. ಉಪ್ಪಾರ್ ಅವರನ್ನು ಸರಕಾರಿ ನೌಕರರ ಯುನಿಟಿ ಕ್ಲಬ್ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು.
ಈ ಸಂದರ್ಭದಲ್ಲಿ ಸರಕಾರಿ ನೌಕರರ ಯುನಿಟಿ ಕ್ಲಬ್ ಅಧ್ಯಕ್ಷ ಕೆ.ಎಂ. ಶ್ರೀನಿವಾಸ, ಸಹಕಾರ ಸಂಘದ ಅಧ್ಯಕ್ಷ ಎಂ.ಎನ್. ಪರಮೇಶ್, ಖಜಾಂಚಿ ಪರಮೇಶ್, ಕಾರ್ಯದರ್ಶಿ ಯತೀಶ್, ಉಪಾಧ್ಯಕ್ಷ ಸತೀಶ್ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.
