ಬೆಳಗಾವಿ : ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ನಿಪ್ಪಾಣಿ ಕ್ಷೇತ್ರದ ಕಾಂಗ್ರೆಸ್ ಮಾಜಿ ಶಾಸಕ ಕಾಕಾ ಸಾಹೇಬ್ ಪಾಟೀಲ್ (70) ಇಂದು ಕೊನೆಯುಸಿರೆಳೆದಿದ್ದಾರೆ.
ಬಹು ಕಾಯಿಲೆಗಳಿಂದ ಬಳಲುತ್ತಿದ್ದ ಮಾಜಿ ಶಾಸಕ ಕಾಕಾ ಸಾಹೇಬ್ ಪಾಟೀಲ್ ಅವರನ್ನು ಬೆಳಗಾವಿಯ ಕೆಎಲ್ಇ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಆದರೆ ಚಿಕಿತ್ಸೆ ಫಲಕಾರಿಯಾಗದೆ ತಡರಾತ್ರಿ 2 ಗಂಟೆಗೆ ಆಸ್ಪತ್ರೆಯಲ್ಲೇ ಮೃತಪಟ್ಟಿದ್ದಾರೆ.
ಕಾಂಗ್ರೆಸ್ ನಾಯಕರಾಗಿದ್ದ ಕಾಕಾ ಸಾಹೇಬ್ ಪಾಟೀಲ್ 1999 ರಿಂದ 2013ರ ವರೆಗೂ ಸತತವಾಗಿ ಚುನಾವಣೆಯಲ್ಲಿ ಗೆಲ್ಲುವ ಮೂಲಕ ನಿಪ್ಪಾಣಿ ಕ್ಷೇತ್ರದಿಂದ ಕಾಂಗ್ರೆಸ್ ಶಾಸಕರಾಗಿದ್ದರು. ಬಳಿಕ ರಾಜಕೀಯದಿಂದ ಕೊಂಚ ದೂರವಿದ್ದರು.
