ಕೆ.ಆರ್.ಪೇಟೆ: ತಾಲ್ಲೂಕಿನ ಕಸಬಾ ಹೋಬಳಿಯ ಲಕ್ಷ್ಮಿಪುರ ಗ್ರಾಮದ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಎಲ್.ವಿ.ಕಿಶೋರ್(53) ಅವರು ಅನಾರೋಗ್ಯದಿಂದ ನಿಧನರಾಗಿದ್ದಾರೆ.
ಮೃತರು ಪತ್ನಿ ಜಲಜಾಕ್ಷಿ, ಇಬ್ಬರು ಹೆಣ್ಣು ಮಕ್ಕಳು, ತಂದೆ ತಾಲ್ಲೂಕು ಸರ್ಕಾರಿ ನೌಕರರ ಸಂಘದ ಮಾಜಿ ಅಧ್ಯಕ್ಷರು, ನಿವೃತ್ತ ಶಿಕ್ಷಕರಾದ ಎ.ಹೆಚ್.ವೆಂಕಟೇಶಗೌಡ ಸೇರಿದಂತೆ ಸೇರಿದಂತೆ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.
ಮೃತರ ಅಂತ್ಯಕ್ರಿಯೆ ಶುಕ್ರವಾರ ಸಂಜೆ ಹುಟ್ಟೂರು ಲಕ್ಷ್ನಿಪುರದಲ್ಲಿ ನಡೆಯಿತು.
ಮೃತರ ನಿಧನಕ್ಕೆ ಸೇರಿದಂತೆ ವಿವಿಧ ಗಣ್ಯರು ಸಂತಾಪ ಸೂಚಿಸಿದ್ದಾರೆ.
– ಶ್ರೀನಿವಾಸ್. ಆರ್.
=============================
