ಕೆ.ಆರ್.ಪೇಟೆ: ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಉಪನ್ಯಾಸಕ ಸೋಮು.ಎಂ ಅವರಿಗೆ ಚಿತ್ರಸಂತೆ ಸಿನಿಮಾ ಪತ್ರಿಕೆಯು ಕೊಡಮಾಡುವ 2026ನೇ ಸಾಲಿನ ‘ಕರ್ನಾಟಕ ಸಾಧಕರ ಹೆಮ್ಮೆಯ ಕನ್ನಡಿಗ’ ಪ್ರಶಸ್ತಿ ದೊರೆತಿರುವ ಹಿನ್ನೆಲೆಯಲ್ಲಿ ಮಾಜಿ ಶಾಸಕರಾದ ಕೆ.ಬಿ.ಚಂದ್ರಶೇಖರ್ ಹಾಗೂ ಕರ್ನಾಟಕ ಸರ್ಕಾರದ ಕೈಮಗ್ಗ ಅಭಿವೃದ್ಧಿ ನಿಗಮದ ಅಧ್ಯಕ್ಷ ಬಿ.ನಾಗೇಂದ್ರಕುಮಾರ್ ಅವರು ಸನ್ಮಾನಿಸಿ ಗೌರವಿಸಿದರು.
ಮಾಜಿ ಶಾಸಕರಾದ ಕೆ.ಬಿ.ಚಂದ್ರಶೇಖರ್ ಅವರು ಮಾತನಾಡಿ ನಮ್ಮ ತಾಲ್ಲೂಕಿನ ಅನುವಿನಕಟ್ಟೆ ಗ್ರಾಮದ ಸುಪುತ್ರ ಅನುವಿನಕಟ್ಟೆ ಸೋಮು ಅವರು ತಾಲ್ಲೂಕು ವಿಕಲ ಚೇತನರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷರಾಗಿ ಹಾಗೂ ವಿವಿಧ ಸಂಘ ಸಂಸ್ಥೆಗಳ ಸದಸ್ಯರಾಗಿ ಸಲ್ಲಿಸಿರುವ ಸಾಮಾಜಿಕ ಸೇವೆಯನ್ನು ಗುರುತಿಸಿ ಸಿನಿಸಂತೆ ಪತ್ರಿಕೆಯವರು
ಬೆಂಗಳೂರಿನಲ್ಲಿ ಇತ್ತೀಚೆಗೆ ನಡೆದ ಪ್ರತಿಷ್ಠಿತ ‘ಅಚೀವರ್ಸ್ ಆಫ್ ಕರ್ನಾಟಕ – ಹೆಮ್ಮೆಯ ಕನ್ನಡಿಗ ಪ್ರಶಸ್ತಿಯನ್ನು ನೀಡಿ ಗೌರವಿಸಿರುವುದು ಶ್ಲಾಘನೀಯವಾದುದು.

ಪ್ರಶಸ್ತಿ ಬಂದಿರುವ ಕಾರಣ ಜವಾಬ್ದಾರಿ ಮತ್ತಷ್ಟು ಹೆಚ್ಚಳವಾಗಿದೆ ಇದನ್ನು ಅರಿತು ಸೋಮು ಮತ್ತಷ್ಟು ಸಾಮಾಜಿಕ ಸೇವಾ ಕಾರ್ಯಕ್ರಮಗಳಲ್ಲಿ ತೊಡಗಿಸಿಕೊಳ್ಳಲಿ ಎಂದು ಶುಭ ಹಾರೈಸಿದರು. ಕರ್ನಾಟಕ ಸರ್ಕಾರದ ಕೈಮಗ್ಗ ಅಭಿವೃದ್ಧಿ ನಿಗಮದ ಅಧ್ಯಕ್ಷ ಬಿ.ನಾಗೇಂದ್ರಕುಮಾರ್ ಮಾತನಾಡಿ ಗ್ರಾಮೀಣ ಪ್ರತಿಭೆಯಾಗಿರುವ ಅನುವಿನಕಟ್ಟೆ ಸೋಮು ಅವರು ಸ್ವತಃ ವಿಕಲ ಚೇತನರಾಗಿದ್ದರೂ ಸಹ ಅದನ್ನು ಮೆಟ್ಟಿನಿಂತು ಸಾಧನೆ ಮಾಡುತ್ತಿರುವುದು ಇತರರಿಗೆ ಮಾದರಿಯಾಗಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಕಾರ್ಯಕ್ರಮದಲ್ಲಿ ತಾಲ್ಲೂಕು ಜಯಕರ್ನಾಟಕ ಸಂಘಟನೆಯ ತಾಲ್ಲೂಕು ಕಾರ್ಯಾಧ್ಯಕ್ಷ ಕೆರೆಕೋಡಿ ಆನಂದ್, ಅಪ್ಪು ಯುವ ಸೇನಾ ಸಮಿತಿ ಅಧ್ಯಕ್ಷರಾದ ಕೆ.ಎಲ್.ಮಹೇಶ್, ಮೈಸೂರು ಜಿಲ್ಲಾ ಕರ್ನಾಟಕ ರಕ್ಷಣಾ ವೇದಿಕೆಯ ಸ್ವಾಭಿಮಾನಿ ಸೇನೆಯ ಅಧ್ಯಕ್ಷ ಸಮೀರ್, ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಉಪಾಧ್ಯಕ್ಷ ಅಗ್ರಹಾರಬಾಚಹಳ್ಳಿ ಶ್ರೀನಿವಾಸ್ ಮತ್ತಿತರರು ಅಭಿನಂದಿಸಿದರು.
– ಶ್ರೀನಿವಾಸ್ ಆರ್.
