ರಾಮನಾಥಪುರ : ಅರಕಲಗೂಡು ತಾಲ್ಲೂಕು ಸ್ವಸ್ಥ ಸಮಾಜ ನಿರ್ಮಾಣ ಸಮಿತಿಯ ವತಿಯಿಂದ ಕಳೆದ ಮೇ 15ರಂದು ರಾಮನಾಥಪುರದ ಭಾಗ್ಯಶ್ರೀ ಕಲ್ಯಾಣ ಮಂಟಪದಲ್ಲಿ ಆಯೋಜಿಸಿದ್ದ ಉಚಿತ ನೇತ್ರ ತಪಾಸಣಾ ಶಿಬಿರದಲ್ಲಿ ಆಯ್ಕೆಯಾದ 43 ಮಂದಿಗೆ ತಮಿಳುನಾಡಿನ ನಲ್ಲಿ ಯಶಸ್ವಿಯಾಗಿ ಕಣ್ಣಿನ ಶಸ್ತ್ರ ಚಿಕಿತ್ಸೆ ನೆರವೇರಿಸಲಾಯಿತು.
ಶಸ್ತ್ರಚಿಕಿತ್ಸೆಗೆ ಒಳಗಾದವರನ್ನು ಮೇ 16ರಂದು ಸಮಿತಿಯ ಅಧ್ಯಕ್ಷ ಅವರು ಕೊಯಮುತ್ತೂರಿನ ಅರವಿಂದ ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದರು. ಬಳಿಕ ವೈದ್ಯರೊಂದಿಗೆ ಸಮಾಲೋಚನೆ ನಡೆಸಿ ಚಿಕಿತ್ಸೆ ಪಡೆದವರನ್ನು ಸುರಕ್ಷಿತವಾಗಿ ಅರಕಲಗೂಡಿಗೆ ಕರೆತಂದರು.

ಈ ಸಂದರ್ಭದಲ್ಲಿ ಶಿಕ್ಷಕರ ಸಂಘದ ಮಾಜಿ ಅಧ್ಯಕ್ಷ ಕಟ್ಟೇಪುರ ವೆಂಕಟೇಶ್ ಸೇರಿದಂತೆ ಸಮಿತಿಯ ಸದಸ್ಯರು ಉಪಸ್ಥಿತರಿದ್ದರು.
– ಕುಮಾರಸ್ವಾಮಿ ಎಂ.ಎನ್.
