ಟಿ.ನರಸೀಪುರ : ಶ್ರೀ ದೇಶೇಶ್ವರ ಸ್ವಾಮಿ ಹಾಗೂ ಶ್ರೀ ಪಾರ್ವತಿ ಅಮ್ಮ ನವರ ಗಿರಿಜಾ ಕಲ್ಯಾಣ ಮಹೋತ್ಸವದ ಅಂಗವಾಗಿ ನಡೆದ ಹೂವಿನ ಪಲ್ಲಕ್ಕಿ ಉತ್ಸವ ಮೂಗೂರಿನಲ್ಲಿ ಭಾನುವಾರ ಸಂಜೆ ಬಹಳ ವಿಜೃಂಭಣೆಯಿಂದ ಜರುಗಿತು.
ತಾಲ್ಲೂಕಿನ ಮೂಗೂರು ಗ್ರಾಮದ ದೇವಾಲಯದಲ್ಲಿ ಬೆಳಿಗ್ಗೆ ಶ್ರೀ ದೇಶೇಶ್ವರ ಸ್ವಾಮಿ ಹಾಗೂ ಶ್ರೀ ಪಾರ್ವತಿ ಅಮ್ಮ ನವರಿಗೆ ಮಹಾರುದ್ರಾಭಿಷೇಕ ವಿಶೇಷ ಪೂಜೆ ದೊಂದಿಗೆ ಧಾರ್ಮಿಕ ವಿಧಿವಿಧಾನಗಳೊಂದಿಗೆ ಪೂಜಾ ಕೈಂಕರ್ಯಗಳು ಸಾಂಘಿಕವಾಗಿ ನಡೆದವು ಸಂಜೆ ಶ್ರೀ ದೇಶೇಶ್ವರ ಸ್ವಾಮಿ ಹಾಗೂ ಶ್ರೀ ಪಾರ್ವತಿ ಅಮ್ಮ ನವರ ಉತ್ಸವ ಮೂರ್ತಿಯನ್ನು ಹೂವಿನ ಪಲ್ಲಕ್ಕಿಯಲ್ಲಿ ಪ್ರತಿಷ್ಠಾಪಿಸಿ ಪೂಜೆ ಸಲ್ಲಿಸಿದ ಬಳಿಕ ಹೂವಿನ ಪಲ್ಲಕ್ಕಿಯಲ್ಲಿ ದೇವಾಲಯದ ಸುತ್ತ ಪ್ರದಕ್ಷಿಣೆ ಹಾಕಿದ ನಂತರ ಹೂವಿನ ಪಲ್ಲಕ್ಕಿ ಉತ್ಸವಕ್ಕೆ ಚಾಲನೆ ನೀಡಲಾಯಿತು.

ಶ್ರೀ ಪಾರ್ವತಿ ಅಮ್ಮ ನವರನ್ನು ಆಭರಣಗಳಿಂದ ಸಿಂಗರಿಸಿ, ವಿವಿಧ ಬಗೆಯ ಹೂವಿನಿಂದ ಅಲಂಕರಿಸಿ ಅಂಗಡಿ ಬೀದಿಯ ಮೂಲಕ ಗ್ರಾಮದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ಉತ್ಸವ ಸಾಗುತ್ತಿದ್ದಂತೆ ಅಲ್ಲಿ ನೇರದಿದ್ದ ಭಕ್ತರು ದಾರಿಯುದ್ದಕ್ಕೂ ಶ್ರೀ ದೇಶೇಶ್ವರ ಸ್ವಾಮಿ ಯವರಿಗೆ ಪೂಜೆ ಸಲ್ಲಿಸಿ ನಮಿಸಿದರು. ಪಲ್ಲಕ್ಕಿ ಉತ್ಸವ ಬಳಿಕ ದೇಗುಲದಲ್ಲಿ ಶ್ರೀ ದೇಶೇಶ್ವರ ಸ್ವಾಮಿ ಹಾಗೂ ಶ್ರೀ ಪಾರ್ವತಿ ಅಮ್ಮ ಮಹಾಮಂಗಳಾರತಿ ನೆರವೇರಿಸುವ ಮೂಲಕ ಗಿರಿಜಾ ಕಲ್ಯಾಣ ಮಹೋತ್ಸವ ಧಾರ್ಮಿಕ ಆಚರಣೆಯ ಕಾರ್ಯಕ್ರಮಗಳಿಗೆ ತೆರೆ ಕಂಡಿತು.
ಈ ಸಂದರ್ಭದಲ್ಲಿ ದೇಗುಲದ ಅರ್ಚಕರಾದ ಸುಬ್ರಹ್ಮಣ್ಯ ಶಾಸ್ತ್ರಿ, ಅಜಯ್ ಶಾಸ್ತ್ರಿ, ಪ್ರಭಾಕರ್ ಶಾಸ್ತ್ರಿ ,ಗ್ರಾಮದ ಮುಖಂಡರು ಗ್ರಾಮಸ್ಥರು ಉಪಸ್ಥಿತರಿದ್ದರು.
– ಎಂ. ನಾಗೇಂದ್ರ ಕುಮಾರ್
