ಬೆಂಗಳೂರು: 2025–26ನೇ ಶೈಕ್ಷಣಿಕ ಸಾಲಿನಲ್ಲಿ ಒಂದನೇ ತರಗತಿಯಿಂದ ಅಂತಿಮ ವರ್ಷದ ಪದವಿ ಹಾಗೂ ಡಿಪ್ಲೋಮಾ ತರಗತಿವರೆಗೆ ವ್ಯಾಸಂಗ ಮಾಡುತ್ತಿರುವ ಕರ್ನಾಟಕದ ಮೂಲ ನಿವಾಸಿ ಮಾಜಿ ಸೈನಿಕರ ಮಕ್ಕಳಿಗೆ ನೀಡಲಾಗುವ ಶಿಷ್ಯವೇತನಕ್ಕೆ ಅರ್ಜಿ ಸಲ್ಲಿಸುವ ಅವಧಿಯನ್ನು ಜ. 31ರವರೆಗೆ ವಿಸ್ತರಿಸಲಾಗಿದೆ.
ಕೇಂದ್ರೀಯ ಸೈನಿಕ ಮಂಡಳಿ ಹಾಗೂ ಇತರೆ ಸರ್ಕಾರಿ ಮೂಲಗಳಿಂದ ಯಾವುದೇ ಶಿಷ್ಯವೇತನವನ್ನು ಪಡೆಯದಿರುವ ಮಾಜಿ ಸೈನಿಕರ ಮಕ್ಕಳು ಈ ಯೋಜನೆಗೆ ಅರ್ಹರಾಗಿರುತ್ತಾರೆ. ಶಿಷ್ಯವೇತನಕ್ಕಾಗಿ ಅಗತ್ಯವಿರುವ ಶುಲ್ಕರಹಿತ ಅರ್ಜಿಗಳನ್ನು ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ, ಶಿವಮೊಗ್ಗ ಕಚೇರಿಯಲ್ಲಿ ವಿತರಿಸಲಾಗುತ್ತಿದೆ.
ಭರ್ತಿ ಮಾಡಿದ ಅರ್ಜಿಗಳನ್ನು ಜ. 31ರೊಳಗಾಗಿ ಉಪನಿರ್ದೇಶಕರು, ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ, ಶಿವಮೊಗ್ಗ ಕಚೇರಿಗೆ ಸಲ್ಲಿಸಬೇಕೆಂದು ತಿಳಿಸಲಾಗಿದೆ.
ಹೆಚ್ಚಿನ ಮಾಹಿತಿಗಾಗಿ ಕಚೇರಿ ವೇಳೆಯಲ್ಲಿ ದೂರವಾಣಿ ಸಂಖ್ಯೆ 08182-220925 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಶಿವಮೊಗ್ಗ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

[…] […]