
ರಾಜ್ಯ ಸರ್ಕಾರದಿಂದ ರಾಷ್ಟ್ರೀಯ ಪಿಂಚಣಿ ಯೋಜನೆಯಿಂದ ಡಿಫೈನ್ಡ್ ಪಿಂಚಣಿ ಯೋಜನೆಯ ವ್ಯಾಪ್ತಿಗೆ ಒಳಪಟ್ಟಿರುವಂತ ಸರ್ಕಾರಿ ನೌಕರರ ಎನ್ ಪಿ ಎಸ್ ಪ್ರಾನ್ ಖಾತೆಯಲ್ಲಿನ ಮೊತ್ತವನ್ನು ಹಿಂಪಡೆಯುವ ಕುರಿತಂತೆ ಮಾರ್ಗಸೂಚಿಯನ್ನು ಹೊರಡಿಸಿದೆ.
ಈ ಸಂಬಂಧ ರಾಜ್ಯ ಸರ್ಕಾರದಿಂದ ನಡವಳಿಯನ್ನು ಹೊರಡಿಸಲಾಗಿದ್ದು, ದಿನಾಂಕ: 01.04.2006 ರಂದು ಹಾಗೂ ತದನಂತರ ಸರ್ಕಾರಿ ಸೇವೆಗೆ ಸೇರಿದ ಎಲ್ಲಾ ಸರ್ಕಾರಿ ನೌಕರರಿಗೆ ನೂತನ ಅಂಶದಾಯಿ ಕೊಡುಗೆ ಯೋಜನೆಯನ್ನು (ರಾಷ್ಟ್ರೀಯ ಪಿಂಚಣಿ ಯೋಜನೆ) ಕಡ್ಡಾಯವಾಗಿ ಜಾರಿಗೊಳಿಸಲಾಗಿದೆ ಎಂದು ತಿಳಿಸಿದೆ.
ಓದಲಾದ ಕ್ರಮ ಸಂಖ್ಯೆ (2)ರ ಸರ್ಕಾರಿ ಆದೇಶದಲ್ಲಿನ ಸೂಚನೆಗಳನ್ವಯ ರಾಷ್ಟ್ರೀಯ ಪಿಂಚಣಿ ಯೋಜನೆಯನ್ನು ಜಾರಿಗೊಳಿಸುವ ಮಾರ್ಗಸೂಚಿಯನ್ನು ರೂಪಿಸುವುದರೊಂದಿಗೆ ಈ ಯೋಜನೆಯನ್ನು ಕಾರ್ಯಗತಗೊಳಿಸಲಾಗಿದೆ ಎಂದಿದೆ.