
ಸರ್ಕಾರಿ ಕಛೇರಿಗಳಲ್ಲಿ ಮಹಿಳಾ ಸಿಬ್ಬಂದಿಗಳು ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ. ಮಹಿಳಾ ಸಿಬ್ಬಂದಿಗೆ ಪ್ರತ್ಯೇಕ ವಿಶ್ರಾಂತಿ ಕೊಠಡಿ ವ್ಯವಸ್ಥೆ, ಇತರೆ ಸೌಲಭ್ಯಗಳನ್ನು ಕಲ್ಪಿಸುವ ಕುರಿತು ಸರ್ಕಾರದ ಮುಖ್ಯ ಕಾರ್ಯದರ್ಶಿಗಳಿಗೆ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಪತ್ರವನ್ನು ಬರೆದಿತ್ತು.
ಈಗ ಈ ವಿಚಾರದಲ್ಲಿ ಸರ್ಕಾರ ಮಾಹಿತಿಯನ್ನು ಕೇಳಿದ್ದು, ಅತಿ ತುರ್ತಾಗಿ ಮಾಹಿತಿ ಒದಗಿಸಬೇಕು ಎಂದು ಸೂಚನೆ ನೀಡಿದೆ.
ಈ ಕುರಿತು ವಿಮಲಾಕ್ಷಿ ಬಿ. ಸರ್ಕಾರದ ಅಧೀನ ಕಾರ್ಯದರ್ಶಿ, ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ (ಆಸು-ತಪಾಸಣೆ-ಸ್ವೀಮರ) ಆದೇಶವನ್ನು ಹೊರಡಿಸಿದ್ದಾರೆ. ಈ ಸುತ್ತೋಲೆ ಸರ್ಕಾರಿ ಕಛೇರಿಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಮಹಿಳಾಸಿಬ್ಬಂದಿಗಳಿಗೆ ಪ್ರತ್ಯೇಕ ವಿಶ್ರಾಂತಿ ಕೊಠಡಿ ವ್ಯವಸ್ಥೆ ಒದಗಿಸುವ ಬಗ್ಗೆ ಎಂಬ ವಿಷಯವನ್ನು ಒಳಗೊಂಡಿದ್ದು, ಅಧ್ಯಕ್ಷರು, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಪತ್ರವನ್ನು ಉಲ್ಲೇಖಿಸಲಾಗಿದೆ.