ಸರ್ಕಾರಿ ಅಧಿಕಾರಿಗಳಿಗೆ ಬ್ಲ್ಯಾಕ್‌ಮೇಲ್‌ ಕೇಸ್​: ಸ್ಪೋಟಕ ಮಾಹಿತಿ ಬಹಿರಂಗ

ಬೆಂಗಳೂರು, ಜೂನ್ 16: ಸರ್ಕಾರಿ ಅಧಿಕಾರಿಗಳನ್ನು ಬ್ಲ್ಯಾಕ್‌ಮೇಲ್ ಮಾಡಿ ಹಣ ವಸೂಲಿಸಿದ್ದ ಆರೋಪದ ಮೇಲೆ ಬಂಧಿತನಾದ ಮಾಜಿ ಹೆಡ್‌ಕಾನ್‌ಸ್ಟೇಬಲ್ ನಿಂಗಪ್ಪ, ಲೋಕಾಯುಕ್ತ ತನಿಖೆ ವೇಳೆ ಸ್ಫೋಟಕ ಮಾಹಿತಿಯನ್ನು ಬಹಿರಂಗಪಡಿಸಿದ್ದಾನೆ. ಹಣವನ್ನು ಬಿಟ್‌ಕಾಯಿನ್‌ನಲ್ಲಿ ಹೂಡಿಕೆ ಮಾಡಿದ್ದಾಗಿ ಹೇಳಿರುವ ನಿಂಗಪ್ಪ, ಇಬ್ಬರು ಸಚಿವರ ಆಪ್ತ ಸಹಾಯಕರ ಹೆಸರುಗಳನ್ನು ಕೂಡ ಬಾಯಿಬಿಟ್ಟಿದ್ದಾನೆ. ಶೇಷಾದ್ರಿಪುರಂ ಮತ್ತು ಆನಂದರಾವ್ ವೃತ್ತದಂತಹ ಸ್ಥಳಗಳಲ್ಲಿ ಹಣ ವಸೂಲಿ ಮಾಡಿದ್ದಾನೆ ಎಂಬ ಮಾಹಿತಿ ನೀಡಲಾಗಿದೆ. ನ್ಯಾಯಾಲಯ ನಿಂಗಪ್ಪನನ್ನು ಜೂನ್ 30ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ, ಜಾಮೀನು ಅರ್ಜಿಗೆ ಆಕ್ಷೇಪಣೆಗೆ ಅವಕಾಶ ನೀಡಿದೆ.