ತುಮಕೂರು:ತಾಲ್ಲೋಕಿನ ನಾಗವಲ್ಲಿ ಉರ್ದು
ಕ್ಲಸ್ಟರ್ ನಲ್ಲಿ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿಯನ್ನು ಅದ್ಧೂರಿಯಾಗಿ ಉದ್ಘಾಟನೆ ಮಾಡಲಾಯಿತು.
ಸರ್ಕಾರಿ ಉರ್ದು ಕಿರಿಯ ಪ್ರಾಥಮಿಕ ಪಾಠಶಾಲೆ, ರಂಗನಾಥಪುರ, ನಾಗವಲ್ಲಿ ಉರ್ದು ಕ್ಲಸ್ಟರ್ ನಲ್ಲಿ 2026-27 ನೇ ಸಾಲಿನ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮವನ್ನು ಅದ್ದೂರಿಯಾಗಿ ಉದ್ಘಾಟಿಸಲಾಯಿತು.
ಕಾರ್ಯಕ್ರಮವನ್ನು ಜ್ಯೋತಿ ಬೆಳಗಿಸುವುದರ ಮೂಲಕ ಶಾಲಾ ಎಸ್.ಡಿ.ಎಂ.ಸಿ ಅಧ್ಯಕ್ಷರು ಉದ್ಘಾಟಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ತುಮಕೂರು ತಾಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಜಯಲಕ್ಷ್ಮಿ ಜೆ.ಎಂ. ರವರು ವಹಿಸಿದ್ದರು.
ಈ ಸಂದರ್ಭದಲ್ಲಿ ಪ್ರಾಸ್ತಾವಿಕ ನುಡಿಗಳನ್ನು ಆಡಿದ ಅವರು, ಮಕ್ಕಳಲ್ಲಿ ಸುಪ್ತವಾಗಿರುವ ಪ್ರತಿಭೆಯನ್ನು ಪ್ರದರ್ಶಿಸಲು ಈ ಕಾರ್ಯಕ್ರಮ ನೆರವಾಗುತ್ತದೆ ಎಂದು ತಿಳಿಸಿದರು.

ನಂತರ ಎಲ್ಲಾ ಶಾಲೆಗಳಿಂದ ಬಂದ ವಿದ್ಯಾರ್ಥಿಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ತಮ್ಮಲ್ಲಿರುವ ಕೌಶಲ್ಯವನ್ನು ಪ್ರದರ್ಶಿಸಿದರು , ನಂತರ ಗಣ್ಯರಿಂದ ಬಹುಮಾನಗಳ ವಿತರಣೆ ಮಾಡಿಸಲಾಯಿತು.
ಈ ಸಂದರ್ಭದಲ್ಲಿ ಶಿಕ್ಷಣ ಸಂಯೋಜಕರಾದ ಮೂಡ್ಲಪ್ಪನವರು, ಸಮೂಹ ಸಂಪನ್ಮೂಲ ವ್ಯಕ್ತಿಗಳಾದ ಅಫ್ಷಾನ್ ಕೌಸರ್ , ಶಾಲಾ ಮುಖ್ಯ ಶಿಕ್ಷಕಿಯಾದ ಅರ್ಷಿಯಾ ಫಿರ್ದೋಸ್ , ಶಿಕ್ಷಕಿ ಸುನೀತಾ , ಎಸ್.ಡಿ.ಎಂ.ಸಿ ಅಧ್ಯಕ್ಷರಾದ ಪರ್ವೇಜ್ ಅಹಮದ್ ಹಾಗೂ
ನಾಗವಲ್ಲಿ ಉರ್ದು ಕ್ಲಸ್ಟರ್ ನ ಎಲ್ಲಾ ಶಾಲೆಗಳ ಮುಖ್ಯ ಶಿಕ್ಷಕರುಗಳು, ಸಹ ಶಿಕ್ಷಕರುಗಳು, ಅತಿಥಿ ಶಿಕ್ಷಕರುಗಳು, ಗ್ರಾಮಸ್ಥರು ಹಾಗೂ ಮತ್ತಿತರರು ಉಪಸ್ಥಿತರಿದ್ದು ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.
