
ಕೆಪಿಟಿಸಿಲ್ ನಲ್ಲಿ ಭರ್ಜರಿ ಉದ್ಯೋಗ ಅವಕಾಶ
ಇತ್ತೀಚಿನ ದಿನಗಳಲ್ಲಿ ಉದ್ಯೋಗಾವಕಾಶಗಳು ತೆರೆದುಕೊಳ್ಳುತ್ತಲೇ ಇವೆ. ಹಾಗೆಯೇ ಇದೀಗ ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ (ಕೆಪಿಟಿಸಿಲ್) ಅಕ್ಟೋಬರ್ನಲ್ಲಿ ಕರೆದಿದ್ದ ಅರ್ಜಿಗಳನ್ನು ಇದೀಗ ನೇಮಕ ಮಾಡಿಕೊಳ್ಳಲು ಮುಂದಾಗಿದೆ. ಹಾಗಾದರೆ ಎಷ್ಟು ಹುದ್ದೆಗಳ ಖಾಲಿಯಿವೆ ಎನ್ನುವ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.
ಕೆಪಿಟಿಸಿಲ್ 2024ರ ಅಕ್ಟೋಬರ್ನಲ್ಲಿ 2,975 ಉದ್ಯೋಗಗಳಿಗೆ ಅರ್ಜಿಗಳನ್ನು ಇಲಾಖೆ ಕರೆದಿತ್ತು. ಸದ್ಯ ಈ ಉದ್ಯೋಗಗಳನ್ನು ಏಪ್ರಿಲ್ ಒಳಗೆ ನೇಮಕ ಮಾಡಲಾಗುತ್ತದೆ ಎಂದು ಇಂಧನ ಸಚಿವ ಕೆ.ಜೆ ಜಾರ್ಜ್ ಅವರು ಹೇಳಿದ್ದಾರೆ.
ವಿದ್ಯುತ್ ಪ್ರಸರಣ ನಿಗಮ ನಿಯಮಿತದಲ್ಲಿ ಉದ್ಯೋಗ ಭರ್ತಿ ಕುರಿತು ಮಾತನಾಡಿದ ಇಂಧನ ಸಚಿವ ಕೆ.ಜೆ ಜಾರ್ಜ್ ಅವರು, ಈಗಾಗಲೇ ಅರ್ಜಿ ಕರೆಯಲಾದ ಉದ್ಯೋಗಗಳನ್ನು ಶೀಘ್ರದಲ್ಲೇ ಅಂದರೆ ಏಪ್ರಿಲ್ ಒಳಗೆ ಭರ್ತಿ ಮಾಡಲಾಗುತ್ತದೆ. ಇಲಾಖೆಯಲ್ಲಿ ಖಾಲಿ ಇರುವಂತಹ ಕೆಲಸಗಳನ್ನು ಭರ್ತಿ ಮಾಡುವ ಪ್ರಕ್ರಿಯೆ ಆರಂಭ ಆಗಿದೆ. ಇಡೀ ರಾಜ್ಯದಲ್ಲಿ ಒಂದೇ ದಿನದಲ್ಲಿ ದೈಹಿಕ ಪರೀಕ್ಷೆ ನಡೆಸಲು ಅಧಿಕಾರಿಗಳ ಜೊತೆ ಚರ್ಚಿಸಿ ನಿರ್ಧರಿಸಲಾಗಿದೆ ಎಂದು ಹೇಳಿದರು.
ಈ ಹುದ್ದೆಗಳು ಭರ್ತಿಯಾದ ಮೇಲೆ ಎಇಇ, ಜೆಇ ಸೇರಿದಂತೆ ಇತರೆ ಹುದ್ದೆಗಳನ್ನು ಹಂತ ಹಂತವಾಗಿ ಭರ್ತಿ ಮಾಡು ಯೋಜನೆ ಹಾಕಿಕೊಳ್ಳಲಾಗಿದೆ. ಅಷ್ಟೇ ಅಲ್ಲದೇ ಮತ್ತಷ್ಟು ಉದ್ಯೋಗಗಳಿಗೆ ಅರ್ಜಿ ಆಹ್ವಾನ ಮಾಡುವ ಸಾಧ್ಯತೆಯಿದೆ. ಆ ಬಗ್ಗೆ ಈಗಲೇ ಯಾವುದೇ ನಿರ್ಧಾರ ತೆಗೆದುಕೊಂಡಿಲ್ಲ ಎಂದು ಸಚಿವರು ಹೇಳಿದ್ದಾರೆ.
ಸದ್ಯ ಸಚಿವರು ಮಾತನಾಡಿರುವ ಉದ್ಯೋಗಗಳನ್ನು ಈ ಹಿಂದೆ ಅಂದರೆ 2024ರ ಅಕ್ಟೋಬರ್ 21ರಂದು ಅರ್ಜಿ ಆರಂಭಿಸಿ, ನವೆಂಬರ್ 20ಕ್ಕೆ ಅರ್ಜಿ ಕೊನೆಗೊಂಡಿದ್ದವು. ಕಿರಿಯ ಸ್ಟೇಷನ್ ಪರಿಚಾರಕ ಹುದ್ದೆ 433, ಕಿರಿಯ ಪವರ್ಮ್ಯಾನ್ ಉದ್ಯೋಗಗಳು 2542 ಸೇರಿ ಒಟ್ಟು 2,975 ಉದ್ಯೋಗಗಳಿಗೆ ಅರ್ಜಿ ಪ್ರಕ್ರಿಯೆ ಈಗಾಗಲೇ ಮುಗಿದಿದೆ.
30 ಹುದ್ದೆಗಳಿಗೆ ಅರ್ಜಿ ಆಹ್ವಾನ: ಕರ್ನಾಟಕ ಲೋಕೋಪಯೋಗಿ ಇಲಾಖೆಯಲ್ಲಿ ಖಾಲಿ ಇರುವ 30 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಹಾಗಾದರೆ ಅರ್ಜಿ ಸಲ್ಲಿಸಬಯಸುವವರು ಯಾವೆಲ್ಲ ಅರ್ಹತೆಗಳನ್ನು ಹೊಂದಿರಬೇಕು, ಕೊನೇ ದಿನಾಂಕ ಯಾವಾಗ ಹಾಗೂ ಮಾಸಿಕ ವೇತನ ಎಷ್ಟಿರಲಿದೆ ಎನ್ನುವ ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ಗಮನಿಸಿ.
ಕರ್ನಾಟಕ ಲೋಕೋಪಯೋಗಿ ಇಲಾಖೆಯಲ್ಲಿ ಖಾಲಿ ಇರುವ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಗ್ರೂಪ್-ಎ ಹುದ್ದೆಗಳಿಗೆ ಮತ್ತೆ ಅರ್ಜಿ ಆಹ್ವಾಸಿಸಲಾಗಿದೆ. 2024ರ ಸೆಪ್ಟೆಂಬರ್ 18ರಂದು ಅಧಿಸೂಚನೆ ಹೊರಡಿಸಿ ಅರ್ಹ ಅಭ್ಯರ್ಥಿಗಳಿಂದ ಈಗಾಗಲೇ ಅರ್ಜಿಗಳನ್ನು ಸ್ವೀಕಾರ ಮಾಡಲಾಗಿತ್ತು. ಆದರೆ, ಇದೀಗ ಇದೇ ಉದ್ಯೋಗಗಳಿಗೆ ಕರ್ನಾಟಕ ಲೋಕಸೇವಾ ಆಯೋಗ ಅರ್ಜಿಗಳನ್ನು ಮತ್ತೆ ಆಹ್ವಾನಿಸಿದೆ.
ಗ್ರೂಪ್-ಎ 30 ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಿದ್ದು, ಈ ಪೈಕಿ 29 ಹುದ್ದೆಗಳು ಮುಕ್ತ ಸ್ಪರ್ಧೆ ಅಭ್ಯರ್ಥಿಗಳನ್ನು ಹಾಗೂ 01 ಕೆಲಸಕ್ಕೆ ಸೇವಾನಿರತ ಸ್ಪರ್ಧೆ ಅಭ್ಯರ್ಥಿಯನ್ನು ಭರ್ತಿ ಮಾಡಲಾಗುತ್ತಿದೆ. ಸಾಮಾನ್ಯ ವರ್ಗ 13, ಪರಿಶಿಷ್ಟ ಜಾತಿ 05, ಪರಿಶಿಷ್ಟ ಪಂಗಡ 02, ಪ್ರವರ್ಗ1 01, ಪ್ರವರ್ಗ-2ಎ 05, ಪ್ರವರ್ಗ-2ಬಿ 01, ಪ್ರವರ್ಗ-3ಎ 01, ಪ್ರವರ್ಗ-3ಬಿ 01, ಎಸ್ಸಿ 01, ಸೇರಿದಂತೆ ಒಟ್ಟು 30 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.
ಇನ್ನು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವರು ಇಂಜಿನಿಯರಿಂಗ್ ಪದವಿ ಪಡೆದಿರಬೇಕಾಗುತ್ತದೆ. ಸಿವಿಲ್ ಇಂಜಿನಿಯರ್, ಕನ್ಸ್ಟ್ರಕ್ಷನ್ ಟೆಕ್ನಲಾಜಿ, ಬಿಲ್ಡಿಂಗ್ ಅಂಡ್ ಕಂಸ್ಟ್ರಕ್ಷನ್ ಟೆಕ್ನಾಲಜಿ, ಸಿವಿಲ್ ಟೆಕ್ನಾಲಜಿ ಕಂಸ್ಟ್ರಕ್ಷನ್ ಟೆಕ್ನಾಲಜಿ, ಕಂಸ್ಟ್ರಕ್ಷನ್ ಇಂಜಿನಿಯರಿಂಗ್ ಮತ್ತು ಮ್ಯಾನೇಜ್ಮೆಂಟ್, ಜಿಯೋಮೆಕಾನಿಕ್ಸ್ ಮತ್ತು ಸ್ಟ್ರಕ್ಚರ್ಸ್, ಸ್ಟ್ರಕ್ಚರಲ್ ಅಂಡ್ ಫೌಂಡೇಷನ್ ಇಂಜಿನಿಯರಿಂಗ್, ಸ್ಟ್ರಕ್ಚರಲ್ ಇಂಜಿನಿಯರಿಂಗ್ ಮತ್ತು ಕಂಸ್ಟ್ರಕ್ಷನ್ ಪದವಿ ಇದರಲ್ಲಿ ಯಾವುದಾದರೊಂದನ್ನ ಪೂರ್ಣಗೊಳಿಸಿರಬೇಕು.