ಹಾಸನ, ಮಾ. 2: ಜಿಲ್ಲೆಯ ಯುವಕರಿಗೆ ಉದ್ಯೋಗಾವಕಾಶಗಳನ್ನು ಒದಗಿಸುವ ಉದ್ದೇಶದಿಂದ ಮಾರ್ಚ್ 7, 2026 (ಶನಿವಾರ)ರಂದು ಹಾಸನದಲ್ಲಿ ಭಾರಿ ಪ್ರಮಾಣದ “ಯುವ ಉದ್ಯೋಗ ಮೇಳ”ವನ್ನು ಆಯೋಜಿಸಲಾಗಿದೆ.
Karnataka Skill Development Corporation (ಕೆಎಸ್ಡಿಸಿ), ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಹಾಸನ ಜಿಲ್ಲಾ ಆಡಳಿತ ಹಾಗೂ ಜಿಲ್ಲಾ ಪಂಚಾಯತ್ ಸಹಯೋಗದಲ್ಲಿ ಈ ಮೇಳ ನಡೆಯಲಿದೆ. ಕಾರ್ಯಕ್ರಮವು ಹಾಸನ ನಗರದ ಡೈರಿ ಸರ್ಕಲ್ ಸಮೀಪದ Government Engineering College Hassan ಆವರಣದಲ್ಲಿ ಆಯೋಜಿಸಲಾಗಿದೆ.
ಮೇಳವು ಬೆಳಿಗ್ಗೆ 9.30ರಿಂದ ಸಂಜೆ 5.00ರವರೆಗೆ ನಡೆಯಲಿದ್ದು, ಸುಮಾರು 100ಕ್ಕೂ ಹೆಚ್ಚು ಕಂಪನಿಗಳು ಭಾಗವಹಿಸುವ ನಿರೀಕ್ಷೆಯಿದೆ. ವಿವಿಧ ಕ್ಷೇತ್ರಗಳಲ್ಲಿ ಒಟ್ಟು 10,000ಕ್ಕೂ ಹೆಚ್ಚು ಉದ್ಯೋಗಾವಕಾಶಗಳು ಲಭ್ಯವಿರಲಿವೆ ಎಂದು ಆಯೋಜಕರು ತಿಳಿಸಿದ್ದಾರೆ.
ಉದ್ಯೋಗಾರ್ಥಿಗಳು ಸ್ಥಳದಲ್ಲೇ ನೋಂದಣಿ ಮಾಡಿಕೊಳ್ಳಬಹುದಾಗಿದೆ. ಅಭ್ಯರ್ಥಿಗಳಿಗಾಗಿ ವಿಶೇಷ ಕ್ಯೂಆರ್ ಕೋಡ್ ವ್ಯವಸ್ಥೆ ಕಲ್ಪಿಸಲಾಗಿದ್ದು, ಎಚ್ಆರ್ ಪ್ರತಿನಿಧಿಗಳಿಗಾಗಿ ಪ್ರತ್ಯೇಕ ನೋಂದಣಿ ವ್ಯವಸ್ಥೆಯೂ ಇರಲಿದೆ.
ಹೆಚ್ಚಿನ ಮಾಹಿತಿಗಾಗಿ 9844792015 / 63603 21766 ಸಂಖ್ಯೆಗಳನ್ನ ಸಂಪರ್ಕಿಸಬಹುದಾಗಿದೆ. ಜಿಲ್ಲೆಯ ಯುವಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಲಭ್ಯವಿರುವ ಉದ್ಯೋಗಾವಕಾಶಗಳನ್ನು ಸದುಪಯೋಗಪಡಿಸಿಕೊಳ್ಳುವಂತೆ ಆಯೋಜಕರು ಮನವಿ ಮಾಡಿದ್ದಾರೆ.
