ತುಮಕೂರು: ನಗರದ ಶೆಟ್ಟಿಹಳ್ಳಿ ಮುಖ್ಯ ರಸ್ತೆಯ ಜಯನಗರ ಪೂರ್ವದಲ್ಲಿರುವ ಶ್ರೀ ಶಿರಡಿ ಸಾಯಿ ಮಂದಿರದಲ್ಲಿ ಗುರು ಪೂರ್ಣಿಮಾ ಅಂಗವಾಗಿ ವಿಶೇಷ ಪೂಜೆ ಹಾಗೂ ಅಲಂಕಾರ ಕಾರ್ಯಕ್ರಮವನ್ನು ಭಕ್ತಿಭಾವದಿಂದ ನೆರವೇರಿಸಲಾಯಿತು.
ಗುರು ಪೂರ್ಣಿಮೆಯ ಪ್ರಯುಕ್ತ ಶ್ರೀ ಶಿರಡಿ ಸಾಯಿಬಾಬಾ ಅವರಿಗೆ ವಿಶೇಷ ಅಲಂಕಾರ ಮಾಡಲಾಗಿದ್ದು, ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಜರುಗಿದವು. ಅಪಾರ ಸಂಖ್ಯೆಯಲ್ಲಿ ಭಕ್ತಾದಿಗಳು ಆಗಮಿಸಿ ಸಾಯಿಬಾಬಾ ದರ್ಶನ ಪಡೆದು ಪೂಜೆ ಸಲ್ಲಿಸಿದರು.
ಮಂದಿರದ ಅಧ್ಯಕ್ಷರಾದ ಗೋಪಾಲ್ ಅವರ ನೇತೃತ್ವದಲ್ಲಿ ನಡೆದ ಕಾರ್ಯಕ್ರಮದಲ್ಲಿ ಆರ್.ಎಸ್. ವೀರಪ್ಪದೇವರು, ಮಹದೇವಪ್ಪ, ರೇಣುಕಪ್ಪ, ಸತ್ಯನಾರಾಯಣ್, ಕುಮಾರಸ್ವಾಮಿ, ರಾಘವೇಂದ್ರ ರಾಜು, ಪ್ರದೀಪ್, ಮಾರುತಿ ಪ್ರಸಾದ್ ಸೇರಿದಂತೆ ಹಲವು ಗಣ್ಯರು ಹಾಗೂ ಭಕ್ತರು ಭಾಗವಹಿಸಿದ್ದರು.
ಕಾರ್ಯಕ್ರಮದ ಅಂಗವಾಗಿ ಆಗಮಿಸಿದ್ದ ಭಕ್ತಾದಿಗಳಿಗೆ ಅನ್ನಸಂತರ್ಪಣೆ ಏರ್ಪಡಿಸಲಾಗಿತ್ತು. ಭಕ್ತರು ಪ್ರಸಾದ ಸ್ವೀಕರಿಸಿ ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದರು
-ಕೆ.ಬಿ. ಚಂದ್ರಚೂಡ
