ಹಾಸನ, ಆ.14: ಸಕಲೇಶಪುರ ತಾಲೂಕಿನ ಇಬ್ಬಡಿ ಕೊಣನೂರು ಗ್ರಾಮದಲ್ಲಿ ಚೀಟಿ ಹಣದ ವಿವಾದಕ್ಕೆ ಸಂಬಂಧಿಸಿದಂತೆ ದಂಪತಿಯ ನಡುವೆ ಉಂಟಾದ ಜಗಳವು ಭೀಕರ ಕೊಲೆಯಲ್ಲಿ ಅಂತ್ಯಗೊಂಡಿದೆ.
ಪತ್ನಿ ಶಿವಮ್ಮ (60) ಅವರನ್ನು ಮಚ್ಚಿನಿಂದ ಕೊಚ್ಚಿ ಪತಿ ಶಿವಯ್ಯ (65) ಕೊಲೆಗೈದ ನಂತರ, ಆತನೇ ತನ್ನ ಕತ್ತು ಕೊಯ್ದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಗಾಯಗೊಂಡ ಶಿವಯ್ಯನನ್ನು ಸಕಲೇಶಪುರ ಕ್ರಾಫರ್ಡ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಸ್ಥಳಕ್ಕೆ ಸಕಲೇಶಪುರ ನಗರ ಪೊಲೀಸ್ ಠಾಣಾ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣದ ತನಿಖೆ ಮುಂದುವರಿದಿದೆ.
