ಹಾಸನ: ಮಲೆನಾಡು ತಾಂತ್ರಿಕ ಕಾಲೇಜು ಹಾಸನದ ಸಿವಿಲ್ ಇಂಜಿನಿಯರಿಂಗ್ ವಿಭಾಗದ ಅಂತಿಮ ವರ್ಷದ ವಿದ್ಯಾರ್ಥಿ ದರ್ಶನ್ ಗೌಡ ಜಿ.ಎನ್. ಆತ್ಮಹತ್ಯೆಗೆ ಶರಣಾಗಿರುವ ದುರ್ಘಟನೆ ನಡೆದಿರುವುದು ಬೆಳಕಿಗೆ ಬಂದಿದೆ.
ಕಾಲೇಜಿನ ವಿದ್ಯಾರ್ಥಿ ಹಾಸ್ಟೆಲ್ನಲ್ಲಿ ತುರುವೇಕೆರೆ ಮೂಲದ ಯುವಕ ದರ್ಶನ್ ಗೌಡ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು, ಘಟನೆ ಬೆಳಕಿಗೆ ಬಂದ ತಕ್ಷಣ ಕಾಲೇಜು ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿಯಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ.
ಸ್ಥಳಕ್ಕೆ ತಕ್ಷಣವೇ ಪೊಲೀಸರ ತಂಡ ಧಾವಿಸಿ ಪರಿಶೀಲನೆ ನಡೆಸಿದ್ದು, ಆತ್ಮಹತ್ಯೆಯ ನಿಖರ ಕಾರಣ ಇನ್ನಷ್ಟೇ ತಿಳಿಯ ಬೇಕಾಗಿದೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಸನ ಬಡಾವಣೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು,ತನಿಖೆ ನಡೆಸಲಾಗುತ್ತಿದೆ.
