
ಹಾಸನ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವುರ ಶುಕ್ರವಾರ ಮಂಡಿಸಿದ ರಾಜ್ಯ ಬಜೆಟ್ ಜನವಿರೋಧಿ, ದಲಿತ ವಿರೋಧಿ ಬಜೆಟ್ ಆಗಿದೆ ಎಂದು ಆರೋಪಿಸಿ ಜಿಲ್ಲಾ ಬಿಜೆಪಿ ಅಧ್ಯಕ್ಷ ಸಿದ್ದೇಶ್ ನಾಗೇಂದ್ರ ನೇತೃತ್ವದಲ್ಲಿ ನಗರದ ಹೇಮಾವತಿ ಪ್ರತಿಮೆ ಬಳಿ ಪ್ರತಿಭಟನೆ ನಡೆಸಲಾಯಿತು.
ಟ್ರ್ಯಾಕ್ಟರ್ ಮೂಲಕ ಡಿಸಿ ಕಚೇರಿ ವರೆಗೂ ಮೆರವಣಿಗೆಯಲ್ಲಿ ಸಾಗಿ, ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು.
ಈ ವೇಳೆ ಮಾತನಾಡಿದ ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅಮಿತ್ ಶೆಟ್ಟಿ, ಸಿದ್ದರಾಮಯ್ಯ ಅವರ ಬಜೆಟ್ ಅಭಿವೃದ್ಧಿಗೆ ವಿರುದ್ಧವಾಗಿದೆ, ಕೇವಲ ಮುಸಲ್ಮಾನರನ್ನು ಓಲೈಸುವ ಸಲುವಾಗಿಯೇ ಬಜೆಟ್ ಮಂಡಿಸಿ ದಾಗಿ. ಇದರಲ್ಲಿ ರಾಜ್ಯದ ಅಭಿವೃದ್ಧಿ ಶೂನ್ಯವಾಗಿದೆ ಎಂದು ದೂರಿದರು.
ಹಾಸನ ಜಿಲ್ಲೆಯಲ್ಲಿಯೂ ಕಾಡಾನೆ ಸಮಸ್ಯೆ, ರೈಲ್ವೆ ಮೇಲ್ವೇತುವೆ, ಸೇರಿ ದಂತೆ ಹಲವು ಪ್ರಮುಖ ಸಮಸ್ಯೆಗಳ ಪರಿಹಾರಕ್ಕೆ ಹಣ ಬಿಡುಗಡೆ ಮಾಡಬಹುದು ಎಂಬ ನಿರೀಕ್ಷೆ ಇತ್ತು. ಆದರೆ ನಿರೀಕ್ಷೆಯಷ್ಟು ಹಣ ಬಿಡುಗಡೆ ಮಾಡಿಲ್ಲ, ರೈತರ, ದಲಿತರ ಅಭಿವೃದ್ಧಿಗೆ ಹಣ ಹಣ ನೀಡಬೇಕಿರುವ ಸರ್ಕಾರ ಎಎಸ್ಪಿ/ಟಿಎಸ್ಪಿ ಹಣವನ್ನು ಗ್ಯಾರಂಟಿ ಯೋಜನೆಗಳಿಗೆ ಬಳಸಿಕೊಂಡು ಹಿಂದುಳಿದ ಸಮು ದಾಯಗಳಿಗೆ ಅನ್ಯಾಯ ಮಾಡಿದೆ ಎಂದು ಆರೋಪಿಸಿದರು.
ರಾಜ್ಯದಲ್ಲಿ ರಸ್ತೆ, ಶಾಲಾ-ಕಾಲೇಜು ಕಟ್ಟಡಗಳು ಶಿಥಿಲವಾಗಿವೆ, ಕುಡಿಯುವ ನೀರಿನ ಸಮಸ್ಯೆಯಿಂದ ಅನೇಕರು ತೊಂದರೆ ಅನುಭವಿಸುತ್ತಿದ್ದಾರೆ. ಇವುಗಳ ಬಗ್ಗೆ ಕಾಳಜಿ ಇಲ್ಲದೆ ಒಂದು ಸಮುದಾಯ ಓಲೈಸುವ ಸಲುವಾಗಿ ಹಾಗೂ ಮತ ಗಳಿಕೆಗಾಗಿ ಬಜೆಟ್ ಮಂಡಿಸಲಾಗಿದೆ.
ಎಲ್ಲಾ ಸಮುದಾಯ, ವರ್ಗಗಳ ಜನರಿಗೂ ನ್ಯಾಯ ಒದಗಿಸುವ ಸಲುವಾಗಿ ಬಜೆಟ್ ಮಂಡಿಸಬೇಕಿತ್ತು. ಬದಲಾಗಿ ಅಭಿವೃದ್ದಿ ಹಾಗೂ ಜನ ವಿರೋಧಿ ಬಜೆಟ್ ಕೊಟ್ಟಿದ್ದಾರೆ. ಹಾಸನ ಜಿಲ್ಲೆಯನ್ನು ಸಂಪೂರ್ಣ ಕಡೆಗಣಿಸಲಾ ಗಿದೆ. ಇದರ ವಿರುದ್ಧ ಮುಂದಿನ ದಿನಗಳಲ್ಲಿ ಜಿಲ್ಲಾ, ತಾಲೂಕು ಹಾಗೂ ಗ್ರಾಮೀಣ ಮಟ್ಟದಲ್ಲಿ ಹೋರಾಟ ರೂಪಿಸಿ, ಜನರಲ್ಲಿ ಜಾಗೃತಿ ಮೂಡಿಸುವ ಕೆಲಸ ಮಾಡಲಾಗುವುದು ಎಂದರು.
ಪ್ರತಿಭಟನೆಯಲ್ಲಿ ನಗರಸಭೆ ಮಾಜಿ ಅಧ್ಯಕ್ಷ ಆರ್.ಮೋಹನ್, ಪ್ರಧಾನ ಕಾರ್ಯದರ್ಶಿ ಗಿರೀಶ್, ಮುಖಂಡರಾದ ಚನ್ನಕೇಶವ, ನಾಗೇಶ್ ಮೊದಲಾದವರಿದ್ದರು.