ಹಾಸನ :- ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಈ ಕೆಳಕಂಡ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ಬಾಲಕಿಯರ ವಸತಿ ಪದವಿ ಪೂರ್ವ ಕಾಲೇಜು, ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಕಾಲೇಜು, ಶಾಲೆಗಳಲ್ಲಿ (ಉನ್ನತ್ತಿಕರಣಗೊಂಡ), ಮೌಲಾನಾ ಆಜಾದ್ ಮಾದರಿ ಕಾಲೇಜುಗಳಿಗೆ 2025-26ನೇ ಶೈಕ್ಷಣಿಕ ಸಾಲಿಗೆ 11ನೇ ತರಗತಿಗೆ ವಿಜ್ಞಾನ ಮತ್ತು ವಾಣಿಜ್ಯ ಕೋರ್ಸಿನ ವಿದ್ಯಾರ್ಥಿಗಳಿಗೆ ಮಾತ್ರ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್, ಮತ್ತು ಪಾರ್ಸಿ ಸಮುದಾಯಕ್ಕೆ ಶೇ 75 ಹಾಗೂ ಪರಿಶಿಷ್ಟ ಜಾತಿ, ಪರಿಶಿಷ್ಠ ವರ್ಗ ಹಾಗೂ ಇತರೆ ಹಿಂದುಳಿದ ವರ್ಗದವರಿಗೆ (ಓಬಿಸಿ) ಶೇ: 25 ಸ್ಥಾನಗಳು ಮೀಸಲಾತಿ ಇರುತ್ತದೆ. ಉಚಿತ ಪ್ರವೇಶಕ್ಕಾಗಿ “ಸೇವಾ ಸಿಂಧು ಪೋರ್ಟಲ್” ಆನ್ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಕೊನೆಯ ಮೇ.17 ಎಲ್ಲಾ ಅರ್ಹ 10ನೇ ತರಗತಿಯಲ್ಲಿ ತೇರ್ಗಡೆಯಾದ ವಿದ್ಯಾರ್ಥಿಗಳು ಆನ್ಲೈನ್ ಮೂಲಕ ಸೇವಾ ಸಿಂಧು ಪೋರ್ಟಲ್ನಲ್ಲಿ ನೇರವಾಗಿ ಲಿಂಕ್ https://sevasindhuservices.karnataka.gov.in ಸಲ್ಲಿಸಬಹುದು ಅಥವಾ ಜಿಲ್ಲಾ ಅಲ್ಪಸಂಖ್ಯಾತರ ಕಚೇರಿ, ಅಥವಾ ತಾಲ್ಲೂಕು ಅಲ್ಪಸಂಖ್ಯಾತರ ಮಾಹಿತಿ ಕೇಂದ್ರಗಳಲ್ಲಿ ಉಚಿತವಾಗಿ ಸಲ್ಲಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಅಧಿಕಾರಿಗಳು, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಆಕಾಶವಾಣಿ ಹಿಂಭಾಗ, ಹಾಸನ. ದೂರವಾಣಿ ಸಂಖ್ಯೆ: 08172-268373/08172-267373 ಗೆ ಸಂಪರ್ಕಿಸಬಹುದಾಗಿದೆ. ಅಥವಾ ಆಯಾ ತಾಲ್ಲೂಕು ಮಾಹಿತಿ ಕೇಂದ್ರಗಳನ್ನು ಸಂಪರ್ಕಿಸಬಹುದು ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ತಿಳಿಸಿದ್ದಾರೆ.
