ಹಾಸನ: ನಕಲಿ ದಾಖಲೆ ಸೃಷ್ಟಿಸಿ ಕೆರೆ ಒತ್ತುವರಿ ಮಾಡುವ ಹುನ್ನಾರ ನಡೆದಿದೆ ಎಂದು ಆರೋಪಿಸಿ ಹೊಳೆನರಸೀಪುರ ತಾಲೂಕು ಶ್ರವಣೂರು ಗ್ರಾಮಸ್ಥರು ನಗರದ ಡಿಸಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
ಗ್ರಾಮ ಹಾಗೂ ಸುತ್ತಮುತ್ತಲ ಜನರಿಗೆ ಜೀವಸೆಲೆಯಾಗಿರುವ ಗ್ರಾಮದ ಕೆರೆಯನ್ನು ಪಕ್ಕದ ಬಂಟರತೊಳಲು ಗ್ರಾಮದ ಮಂಜೇಗೌಡ ಎಂಬುವರು ಒತ್ತುವರಿ ಮಾಡಿಕೊಳ್ಳಲು ಹೊರಟಿದ್ದಾರೆ ಎಂದು ಪ್ರತಿಭಟನಾಕಾರರು ದೂರಿದರು.
ನಕಲಿ ದಾಖಲೆಗಳನ್ನ ಸೃಷ್ಟಿ ಮಾಡಿ ಕೆರೆ ಭೂಮಿ ಲಪಟಾಯಿಸಲು ಸಂಚು ಮಾಡಿದ್ದಾರೆ. ಇದಕ್ಕೆ ಅವಕಾಶ ಮಾಡಿಕೊಡ ಬಾರದು ಎಂದು ಮನವಿ ಮಾಡಿದರು.
ಇದೇ ವಿಚಾರವಾಗಿ ಮಂಜೇಗೌಡ ಸಲ್ಲಿಸಿದ್ದ ಅರ್ಜಿ, 2018 ರಲ್ಲಿ ಎಸಿ ಕೋರ್ಟ್ನಲ್ಲಿ ವಜಾ ಆಗಿದೆ. ಆದರೂ ಮತ್ತೆ ನಕಲಿ ದಾಖಲೆ ಸೃಷ್ಟಿ ಮಾಡಿ ಡಿಸಿ ಕೋರ್ಟ್ ಮೂಲಕ ಭೂಮಿ ಲಪಟಾಯಿಸಲು ಯತ್ನ ಮಾಡಿದ್ದಾರೆ ಎಂದು ಪ್ರತಿಭಟನಾಕಾರರು ದೂರಿದರು.
ಒಟ್ಟು 2 ಎಕರೆ ಭೂಮಿಗೆ ನಕಲಿ ದಾಖಲೆ ಸೃಷ್ಟಿ ಮಾಡಲಾಗಿದೆ. ತಹಸಿಲ್ದಾರ್, ವಿಎ, ಆರ್ಐ ಮೊದಲಾದವರು ಸ್ಥಳ ಮಹಜರ್ ಮಾಡಿದ ವೇಳೆ ವ್ಯತಿರಿಕ್ತ ಹೇಳಿಕೆ ದಾಖಲಾಗಿದ್ದರೂ, ಸರ್ಕಾರಿ ಭೂಮಿ ಖಾಸಗಿ ವ್ಯಕ್ತಿಯ ಪಾಲಾಗುತ್ತಿದೆ. ಆದರೆ ಕೆರೆ ಭೂಮಿ ಉಳಿಸಿ ಎಂದು ಗ್ರಾಮಸ್ಥರು ಆಗ್ರಹಿಸಿದರು.
ಇದನ್ನು ಓದಿ: ಬಿಜೆಪಿಗೆ ರಾಜ್ಯದ ಅಭಿವೃದ್ಧಿ ಸಹಿಸಲಾರದು; ಟೀಕೆಯಲ್ಲಿ ನಿರತರಾಗಿದ್ದಾರೆ – ಸಂಸದ ಸುನಿಲ್ ಬೋಸ್ ವ್ಯಂಗ್ಯ
ಕೂಡಲೇ ಡಿಸಿ ಕೋರ್ಟ್ ಆದೇಶ ರದ್ದು ಮಾಡುವಂತೆ ಆಗ್ರಹಿಸಿದ ಪ್ರತಿಭಟನಾಕಾರರು ಕಳೆದ ವರ್ಷ ಏಕಾಏಕಿ ಕೆರೆ ಜಾಗ ಉಳುಮೆ ಮಾಡಲು ಬಂದಾಗ ಅಕ್ರಮ ಬಯಲಾಗಿದೆ. ಹಲವು ವರ್ಷಗಳಿಂದ ಸಾಗುವಳಿ ಮಾಡುತ್ತಿರುವಂತೆ ಸರ್ಕಾರಿ ದಾಖಲೆ ತಿದ್ದಲಾಗಿದೆ. ಅಧಿಕಾರಿಗಳು ಸ್ಥಳ ಪರಿಶೀಲನೆ ವೇಳೆ ಕೆರೆ ಭೂಮಿಯಲ್ಲಿ ಯಾವುದೇ ಕೃಷಿ ಮಾಡದಿರುವುದು ದೃಢ ಪಟ್ಟಿದೆ ಎಂದರು.
ಎಲ್ಲ ಅಧಿಕಾರಿಗಳು ಸ್ಥಳ ಮಹಜರ್ ಮಾಡಿದಾಗಲೂ ಕೆರೆ ಭೂಮಿ ಎಂದೇ ದಾಖಲೆ ಇದ್ದರೂ ನಕಲಿ ದಾಖಲೆ ಸೃಷ್ಟಿಸಿ ಕೆರೆ ಭೂಮಿ ಕಬಳಿಸಲು ಹೊರಟಿರುವುದನ್ನು ತಡೆಯಬೇಕು ಎಂದು ಒತ್ತಾಯಿಸಿದರು.
ಇದನ್ನು ನೋಡಿ: ‘ಪಕಾ ಜಾಲೂರ್’ ದೋಣಿ ಸ್ಪರ್ಧೆಯ ಮಗು ಪ್ರಸ್ತುತ ಅಂತರ್ಜಾಲದಲ್ಲಿ ವೈರಲ್ ಆಗುತ್ತಿದೆ.

[…] […]