ಹಾಸನ ಜೂ.21:- ಪ್ರಾಚೀನ ಭಾರತದ ಅಮೂಲ್ಯವಾದ ಕೊಡುಗೆಯಾಗಿರುವ ಯೋಗವು ದೈಹಿಕ ಮತ್ತು ಮಾನಸಿಕ ಆರೋಗ್ಯ ಹೆಚ್ಚಿಸುವ ಅತ್ಯಂತ ವಿಶ್ವಾಸಾರ್ಹ ಸಾಧನ, ಮನುಷ್ಯ ಮತ್ತು ಪ್ರಕೃತಿಯ ನಡುವಿನ ಆರೋಗ್ಯ ಹಾಗೂ ಯೋಗಕ್ಷೇಮದ ಯೋಗ ಸಾಧನವಾಗಿದೆ ಎಂದು ಕೇಂದ್ರ ರಾಜ್ಯ ರೈಲ್ವೆ ಹಾಗೂ ಜಲಶಕ್ತಿ ಸಚಿವರಾದ ವಿ.ಸೋಮಣ್ಣ ತಿಳಿಸಿದ್ದಾರೆ.
ವಿಶ್ವ ಪಾರಂಪರಿಕ ತಾಣವಾಗಿರುವ ಹಳೆಬೀಡು ದೇವಾಲಯದ ಆವರಣದಲ್ಲಿ ಇಂದು ನಡೆದ 11ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು ದೇಶದ ಇತಿಹಾಸ ದೇಶ ನಡೆದು ಬಂದ ದಿನವನ್ನು ವಿಶ್ವಕ್ಕೆ ಪರಿಚಯ ಮಾಡುವ ಪರಿಮಿತ್ರವಾದ ದಿನ ಋಷಿ ಮುನಿಗಳು, ಶರಣಮೂರ್ತಿಗಳು ಹಾಗೂ ಸಂಘ ಸಂಸ್ಥೆಗಳು ಅನುಸರಿಸುತ್ತಿದ್ದ ಯೋಗವನ್ನು ಅಂತರಾಷ್ಟ್ರೀಯ ಮಟ್ಟದಲ್ಲಿ ಕೊಂಡೊಯ್ಯುವ ಕೆಲಸವಾಗಿದೆ ಎಂದರು.
ವಿಶ್ವಕ್ಕೆ ದೊಡ್ಡ ಸಂದೇಶ ನೀಡಿದ ವಿಶೇಷ ದಿನ ಇದಾಗಿದ್ದು ಪ್ರಧಾನಿ ನರೇಂದ್ರ ಮೋದಿ ಅವರು 2014 ರಲ್ಲಿ ತೆಗೆದುಕೊಂಡ ಈ ಐತಿಹಾಸಿಕ ನಿರ್ಧಾರಕ್ಕೆ ವಿಶ್ವಸಂಸ್ಥೆ ಸಾಮಾನ್ಯ ಸಭೆಯಲ್ಲಿ ತೀರ್ಮಾನಿಸಿ ಜೂ.21 ನ್ನು ಅಂತಾರಾಷ್ಟ್ರೀಯ ಯೋಗ ದಿನ ಎಂದು ಘೋಷಿಸಲಾಗಿದೆ. ಯೋಗವು ಆರೋಗ್ಯ ಮತ್ತು ಯೋಗಕ್ಷೇಮಕ್ಕೆ ಸಮಗ್ರ ಸೂತ್ರವನ್ನು ನೀಡುತ್ತದೆ ಎಂದು ಸಚಿವರು ತಿಳಿಸಿದರು.

ಈಗಾಗಲೇ 10ವರ್ಷಗಳನ್ನು ಪೂರ್ಣಗೊಳಿಸಿರುವ ಯೋಗ ದಿನ 11ನೆ ವರ್ಷಕ್ಕೆ ಕಾಲಿಟ್ಟಿದ್ದು ಒಂದು ಭೂಮಿ, ಒಂದು ಆರೋಗ್ಯ, ಒಂದು ಯೋಗ ಎಂಬ ಘೋಷವಾಕ್ಯದೊಂದಿಗೆ ಯೋಗ ದಿನಾಚರಣೆ ಆಚರಿಸಲಾಗುತ್ತಿದೆ ಎಂದ ಸಚಿವರು 176 ದೇಶಗಳಲ್ಲಿ ಯೋಗ ದಿನವನ್ನು ಆಚರಿಸಲಾಗುತ್ತದೆ ಎಂದರು.
ವಿಶಾಖಪಟ್ಟಣದಲ್ಲಿ ಇಂದು ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ಐತಿಹಾಸಿಕ ಯೋಗ ದಿನಾಚರಣೆ ನಡೆಯುತ್ತಿದೆ. ಯೋಗ ಉಳಿಸಿ ಬೆಳೆಸಲು ಕೇಂದ್ರ ಸರ್ಕಾರ ಹಲವು ಕಾರ್ಯಕ್ರಮಗಳನ್ನು ಜಾರಿಗೆ ತಂದಿದೆ ಎಂದರು.
ಆಯುಷ್ಮಾನ್ ಆರೋಗ್ಯ ಕ್ಷೇಮ ಮಂದಿರ ಸ್ಥಾಪಿಸಿ ಯೋಗಕ್ಕೆ ಉತ್ತೇಜನ ನೀಡುತ್ತಿದೆ. ಇದರ ಜೊತೆಗೆ ಐತಿಹಾಸಿಕ ಸ್ಥಳಗಳನ್ನು ಉಳಿಸಿ ಬೆಳೆಸುವ ಸಲುವಾಗಿ ಎಲ್ಲಾ ಕೇಂದ್ರ ಸಚಿವರುಗಳನ್ನು ಒಂದೊಂದು ಐತಿಹಾಸಿಕ ಸ್ಥಳಗಳಿಗೆ ನೇಮಿಸಿ ಯೋಗ ದಿನಾಚರಣೆ ಆಚರಿಸಲಾಗುತ್ತಿದೆ ಎಂದರು. ಅದರಂತೆ ನಾನು ಹಳೆಬೀಡಿನಲ್ಲಿ ಕಾರ್ಯಕ್ರಮದಲ್ಲಿ ವಂದೇ ಭಾರತ್ ರೈಲು, ಐ ಫೀಡ್ ಬುಲೆಟ್ ಟ್ರೈನ್, ರೈಲ್ವೆ ನಿಲ್ದಾಣಗಳು ಪುನರ್ ಅಭಿವೃದ್ಧಿ ಇಂತಹ ಯೋಜನೆಗಳ ಮೂಲಕ ಆತ್ಮ ನಿರ್ಭರ ಭಾರತಕ್ಕೆ ಒತ್ತು ನೀಡಿದ್ದಾರೆ ಎಂದರು.
ಭಾರತ ರಕ್ಷಣಾ ಆಯುಧಗಳಿಗೆ ಬೇರೊಂದು ದೇಶದ ಮೇಲೆ ಅವಲಂಬಿತವಾಗಬೇಕಿತ್ತು, ಆದರೆ ಮೇಕ್ ಇನ್ ಇಂಡಿಯಾ ಯೋಜನೆ ಮೂಲಕ ಸ್ವಾವಲಂಬನೆಯ ಆಪರೇಷನ್ ಸಿಂಧೂರದಲ್ಲಿ ಪ್ರಪಂಚಕ್ಕೆ ತೋರಿಸಲಾಗಿದೆ ಎಂದರು.
ಕಳೆದ 11 ವರ್ಷದಲ್ಲೇ 25 ಕೋಟಿ ಜನರನ್ನು ಬಡತನ ರೇಖೆಗಿಂತ ಮೇಲೆ ತರಲಾಗಿದ್ದು ರೈತರ ಕಲ್ಯಾಣಕ್ಕಾಗಿ ಪಿಎಂ ಕಿಸಾನ್ ಯೋಜನೆ ಅನುಷ್ಠಾನಗೊಳಿಸಲಾಗಿದೆ ಪಿಎಂ ಮುದ್ರಾ ಯೋಜನೆಯ ಮೂಲಕ ಸ್ವಂತ ಉದ್ಯೋಗದಾರರಿಗೆ ಬೆಂಬಲ ನೀಡಲಾಗಿದೆ ಎಂದರು.
ಜಲಜೀವನ್ ಮಿಷನ್ ಯೋಜನೆಯಡಿ ಮನೆ ಮನೆಗೆನಲ್ಲಿ ಮೂಲಕ ಕುಡಿಯುವ ನೀರು ನೀಡುವ ಪವಿತ್ರ ಯೋಜನೆ ಜಾರಿಗೊಳಿಸಲಾಗಿದೆ, ಸ್ವಚ್ಛ ಭಾರತ್ ಯೋಜನೆ ಅಡಿ ಶೌಚಾಲಯಗಳನ್ನು ನಿರ್ಮಿಸಲಾಗಿದೆ ಎಂದರು.
ಶಾಸಕರಾದ ಹೆಚ್.ಕೆ ಸುರೇಶ್ ಅವರು ಪ್ರಾಸವಿಕನುಡಿಗಳನ್ನಾಡಿಗಳಾಡಿದರು.
ಕಾರ್ಯಕ್ರಮದಲ್ಲಿ ಪುಷ್ಪಗಿರಿ ಸೋಮಶೇಖರ್ ಸ್ವಾಮೀಜಿ, ಅಪರ ಜಿಲ್ಲಾಧಿಕಾರಿಗಳಾದ ಕೆ.ಟಿ ಶಾಂತಲಾ, ಬೇಲೂರು ತಾಲ್ಲೂಕು ನ್ಯಾಯಾಲಯದ ಜೆ.ಎಂ.ಸಿ ನ್ಯಾಯಾಧೀಶರಾದ ಶಶಿಕಲಾ, ಉಪವಿಭಾಗಾಧಿಕಾರಿ ಶೃತಿ, ತಹಸೀಲ್ದಾರ್ ಮಮತಾ ಮತ್ತಿತ್ತರು ಉಪಸ್ಥಿತರಿದ್ದರು.

[…] […]
[…] […]