ಹಾಸನ: ಜಿಲ್ಲಾ ವಕೀಲರ ಸಂಘ ಹಾಸನ, ಹಾಸನಾಂಬ ಲಯನ್ಸ್, ರೋಟರಿ ಕ್ಲಬ್ ಆಫ್ ಹಾಸನ್ ಸನ್ ರೈಸ್ ಹಾಗೂ ಹಸಿರು ಭೂಮಿ ಪ್ರತಿಷ್ಠಾನದ ಸಂಯುಕ್ತಾಶ್ರಯದಲ್ಲಿ ಗುರುವಾರ (ಆ.13) ಹಾಸನ ಜಿಲ್ಲಾ ವಕೀಲರ ಸಂಘದ ಆವರಣದಲ್ಲಿ ಸ್ವಚ್ಛತಾ ಕಾರ್ಯ ಹಮ್ಮಿಕೊಳ್ಳಲಾಯಿತು.
ಕಾರ್ಯಕ್ರಮದಲ್ಲಿ ವಕೀಲರ ಸಂಘದ ಆವರಣ ಹಾಗೂ ಸುತ್ತಮುತ್ತಲಿನ ಪ್ರದೇಶವನ್ನು ಸ್ವಚ್ಛಗೊಳಿಸಲಾಯಿತು. ಸಾರ್ವಜನಿಕರಲ್ಲಿ ಸ್ವಚ್ಛತೆ ಹಾಗೂ ಪರಿಸರ ಸಂರಕ್ಷಣೆಯ ಕುರಿತು ಜಾಗೃತಿ ಮೂಡಿಸುವ ಉದ್ದೇಶದಿಂದ ಕಾರ್ಯಕ್ರಮ ಆಯೋಜಿಸಲಾಗಿತ್ತು.

ಈ ಸಂದರ್ಭದಲ್ಲಿ ಹಾಸನ ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಕಾರ್ಲೆ ಮೊಗಣ್ಣಗೌಡ ಹಾಗೂ ಪದಾಧಿಕಾರಿಗಳು, ಹಾಸನಾಂಬ ಲಯನ್ಸ್ ಕ್ಲಬ್ ಅಧ್ಯಕ್ಷ ಕೆ.ಕೆ. ಮೋಹನ್ ಕುಮಾರ್ ಹಾಗೂ ಪದಾಧಿಕಾರಿಗಳು, ಹಸಿರು ಭೂಮಿ ಪ್ರತಿಷ್ಠಾನದ ಕಾರ್ಯದರ್ಶಿ ಗಿರಿಜಾಂಬಿಕ ಎಂ.ಬಿ., ಟ್ರಸ್ಟಿ ದಿನೇಶ್ ಕುಮಾರ್, ರೋಟರಿ ಕ್ಲಬ್ ಆಫ್ ಹಾಸನ್ ಸನ್ ರೈಸ್ ಅಧ್ಯಕ್ಷ ರೋ. ಕೆ.ಎಸ್. ಯೋಗೇಶ್, ಕ್ಲಬ್ನ ಹಿರಿಯ ಸದಸ್ಯ ರೋ. ವೇಣುಗೋಪಾಲ್ ಸೇರಿದಂತೆ ಹಲವರು ಭಾಗವಹಿಸಿದ್ದರು.
ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದ ಎಲ್ಲರಿಗೂ ಆಯೋಜಕರು ಕೃತಜ್ಞತೆ ಸಲ್ಲಿಸಿದರು.
