ಹಾಸನ: ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ (ರಿ.), ಬೆಂಗಳೂರು ವತಿಯಿಂದ ಆಲೂರು ತಾಲ್ಲೂಕು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ತಾಲ್ಲೂಕು ಅಧ್ಯಕ್ಷ ಡಿ.ಎಂ. ವರದರಾಜು ಅವರನ್ನು ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಕೇಂದ್ರ ಸಂಘದ ಹಿರಿಯ ಉಪಾಧ್ಯಕ್ಷರಾಗಿ ನೇಮಕ ಮಾಡಲಾಗಿದೆ.
ಸಂಘದ ರಾಜ್ಯಾಧ್ಯಕ್ಷ ಚಂದ್ರಶೇಖರ ನುಗ್ಗಲಿ ಹಾಗೂ ರಾಜ್ಯ ಕಾರ್ಯದರ್ಶಿ ಚೇತನ್ ಎಚ್.ಎಸ್. ಅವರು ಡಿ.ಎಂ. ವರದರಾಜು ಅವರ ಹಿರಿತನ, ಸಂಘಟನಾ ಕೌಶಲ ಹಾಗೂ ಸೇವಾ ಚಟುವಟಿಕೆಗಳನ್ನು ಪರಿಗಣಿಸಿ ಈ ಜವಾಬ್ದಾರಿ ವಹಿಸಿದ್ದಾರೆ.

ಹೊಸ ಜವಾಬ್ದಾರಿ ವಹಿಸಿಕೊಂಡಿರುವ ಡಿ.ಎಂ. ವರದರಾಜು ಅವರಿಗೆ ಶಿಕ್ಷಕರ ವಲಯದಿಂದ ಅಭಿನಂದನೆಗಳು ವ್ಯಕ್ತವಾಗಿವೆ.
