ಹಾಸನ, ಆ.15 – 79ನೇ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಜಿಲ್ಲಾ ವಕೀಲರ ಸಂಘ, ರೋಟರಿ ಕ್ಲಬ್ ಆಫ್ ಹಾಸನ್ ಸನ್ರೈಸ್ ಹಾಗೂ ಹಾಸನಾಂಬ ಲಯನ್ಸ್ ಕ್ಲಬ್ಗಳ ಸಂಯುಕ್ತ ಆಶ್ರಯದಲ್ಲಿ ಧ್ವಜಾರೋಹಣ ಹಾಗೂ ಸಿಮೆಂಟ್ ಕುರ್ಚಿಗಳ ವಿತರಣೆ ಕಾರ್ಯಕ್ರಮವನ್ನು ಇಂದು ಬೆಳಿಗ್ಗೆ ಜಿಲ್ಲಾ ವಕೀಲರ ಸಂಘದ ಆವರಣದಲ್ಲಿ ಹಮ್ಮಿಕೊಳ್ಳಲಾಯಿತು.
ವಕೀಲರ ಸಂಘದ ಅಧ್ಯಕ್ಷ ಕಾರ್ಲೆ ಮೊಗಣ್ಣಗೌಡರು ಧ್ವಜಾರೋಹಣ ನೆರವೇರಿಸಿ, ದೇಶಭಕ್ತಿಯ ಹಿತನುಡಿಗಳನ್ನು ನುಡಿದರು. ನಂತರ ನ್ಯಾಯಾಧೀಶರು ಹಾಗೂ ಸದಸ್ಯರು ರಾಷ್ಟ್ರಗೀತೆಯನ್ನು ಹಾಡಿದರು.

ಈ ಸಂದರ್ಭ, ರೋಟರಿ ಕ್ಲಬ್ ಮತ್ತು ಲಯನ್ಸ್ ಕ್ಲಬ್ ವತಿಯಿಂದ ವಕೀಲರ ಸಂಘದ ಆವರಣಕ್ಕೆ ನಾಲ್ಕು ಸಿಮೆಂಟ್ ಕುರ್ಚಿಗಳನ್ನು ಕೊಡುಗೆಯಾಗಿ ನೀಡಲಾಯಿತು.
ಕಾರ್ಯಕ್ರಮ ಯಶಸ್ವಿಗೆ ಸಹಕಾರ ನೀಡಿದ ಎಲ್ಲರಿಗೂ ಆಯೋಜಕರು ಧನ್ಯವಾದಗಳನ್ನು ಅರ್ಪಿಸಿದರು.
