ಹಾಸನ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಸಂಯುಕ್ತಾಶ್ರಯದಲ್ಲಿ ಏ. 07 ಮತ್ತು 08 ರಂದು ಜಿಲ್ಲಾ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆಯನ್ನು ಏರ್ಪಡಿಸಲಾಗಿದೆ ಎಂದು ಸರ್ಕಾರಿ ನೌಕರರ ಜಿಲ್ಲಾ ಘಟಕದ ಅಧ್ಯಕ್ಷ ಬಾಗೂರು ಕೃಷ್ಣಗೌಡ ತಿಳಿಸಿದರು.
ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಅವರು, ನಗರದ ಜಿಲ್ಲಾ ಕ್ರೀಡಾಂಗಣ ಹಾಸನಾಂಬ ಒಳಗಡೆ ಕ್ರೀಡಾಂಗಣ ಹಾಗೂ ಸಾಂಸ್ಕೃತ ಸ್ಪರ್ಧೆಗಳನ್ನು ಯೂತ್ ಹಾಸ್ಟೆಲ್ನ ಸಭಾಂಗಣದಲ್ಲಿ ನಡೆಸಲಾಗುವುದು ಎಂದು ತಿಳಿಸಿದರು.
ಏ. 7 ರಂದು ಬೆಳಗ್ಗೆ 11 ಗಂಟೆಗೆ ಕ್ರೀಡಾಕೂಟ ಉದ್ಘಾಟನಾ ಸಮಾರಂಭದಲ್ಲಿ ಮಾಜಿ ಪ್ರಧಾನ ಮಂತ್ರಿ ಹೆಚ್ ಡಿ. ದೇವೇಗೌಡ ಘನ ಉಪಸ್ಥಿತಿ ವಹಸಲಿದ್ದು ಜಿಲ್ಲಾ ಉಸ್ತುವಾರಿ ಸವಿಚವ ಕೆ. ಎನ್. ರಾಜಣ್ಣ ಕ್ರೀಡಾಕೂಟಕ್ಕೆ ಉದ್ಘಾಟಿಸಲಿದ್ದಾರೆ. ಶಾಸಕ ಕೆ.ಎಂ. ಶಿವಲಿಂಗೇಗೌಡ ಗೌರವ ಉಪಸ್ಥಿತಿ ವಹಿಸಲಿದ್ದಾರೆ. ಶಾಸಕ ಸ್ವರೂಪ್ಪ್ರ ಕಾಶ್ ಅಧ್ಯಕ್ಷತೆ ವಹಿಸಲಿದ್ದಾರೆ ಎಂದರು.
ಸಂಸದ ಶ್ರೇಯಸ್ ಪಟೇಲ್, ಶಾಸಕ ಎಚ್. ಡಿ. ರೇವಣ್ಣ, ಸಿ.ಎನ್ ಬಾಲಕೃಷ್ಣ, ಎಂಎಲ್ ಸಿ ಸೂರಜ್ ರೇವಣ್ಣ, ಮಧು ಜಿ ಮಾದೇಗೌಡ, ಶಾಸಕರಾದ ಎ. ಮಂಜು, ಹೆಚ್ ಕೆ ಸುರೇಶ್, ಸಿಮೆಂಟ್ ಮಂಜು ಮುಖ್ಯ ಅತಿಥಿಗಳಾಗಿ ಭಾಗವಹಿಸುವರು ಎಂದರು.
ಅಂದು ಸಂಜೆ 6 ಕ್ಕೆ ಅನುರಾಧ ಭಟ್ ಮತ್ತು ತಂಡದವರಿಂದ ವಿಶೇಷವಾಗಿ ಸಂಗೀತ ಸಂಜೆ ರಸಮಂಜರಿ ಸಾಂಸ್ಕೃತಿಕ ಕಾರ್ಯಕ್ರಮ ಏರ್ಪಡಿಸಲಾಗಿದೆ ಎಂದರು.
ಈಗಾಗಲೇ 2200 ಮಂದಿ ಕ್ರೀಡಾಕೂಟದಲ್ಲಿ ಭಾಗವಹಿಸಲು ನೋಂದಾವಣೆ ಮಾಡಿಕೊಂಡಿದ್ದು ಸುಮಾರು 2500 ಮಂದಿ ಸರ್ಕಾರಿ ನೌಕರರು ಕ್ರೀಡಾಕೂಟದಲ್ಲಿ ಭಾಗವಹಿಸುವ ನಿರೀಕ್ಷೆ ಇದೆ ಎಂದು ತಿಳಿಸಿದರು.
ಕ್ರೀಡಾಕೂಟದಲ್ಲಿ ಶಟಲ್ ಬ್ಯಾಡ್ಮಿಂಟನ್, ಬಾಲ್ ಬ್ಯಾಡ್ಮಿಂಟನ್, ಕ್ರಿಕೆಟ್, ಬ್ಯಾಸ್ಕೆಟ್ಬಾಲ್, ಚೆಸ್, ಪ್ರೋಬಾಲ್ ಯೋಗಾ, ಕೋಕೋ ಸೇರಿದಂತೆ ಇತರೆ ಕ್ರೀಡೆಗಳು ಜರುಗಲಿದೆ ಎಂದು ವಿವರಿಸಿದರು.
ಕ್ರೀಡಾಕೂಟದಲ್ಲಿ ಭಾಗವಹಿಸುವ ಸರ್ಕಾರಿ ನೌಕರರಿಗೆ ಓಓಡಿ ಸೌಲಭ್ಯವನ್ನು ಒದಗಿಸಲಾಗಿದೆ ಎಂದು ತಿಳಿಸಿದರು.
