ಹಾಸನ : ಕೇಂದ್ರ ಕನ್ನಡ ಸಾಹಿತ್ಯ ವೇದಿಕೆ (ರಿ.) ಬೆಂಗಳೂರು ಸಂಸ್ಥಾಪಕ ಅಧ್ಯಕ್ಷರು ಹಾಗೂ ಸಾಹಿತಿಗಳಾದ ಕೊಟ್ರೇಶ್ ಎಸ್ ಉಪ್ಪಾರ್ ಅವರನ್ನು ಸರಕಾರಿ ನೌಕರರ ಯುನಿಟಿ ಕ್ಲಬ್ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು. ಈ ಸಂದರ್ಭದಲ್ಲಿ ಸರಕಾರಿ ನೌಕರರ ಯುನಿಟಿ ಕ್ಲಬ್ ಅಧ್ಯಕ್ಷ ಕೆ. ಎಂ. ಶ್ರೀನಿವಾಸ, ಸಹಾಕಾರ ಸಂಘದ ಅಧ್ಯಕ್ಷ ಎಂ.ಎನ್. ಪರಮೇಶ್, ಖಜಾಂಚಿ ಪರಮೇಶ್, ಕಾರ್ಯದರ್ಶಿ ಯತೀಶ್, ಉಪಾಧ್ಯಕ್ಷ ಸತೀಶ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.
