ಹಾಸನ: ಶಾಂತಿ ಗ್ರಾಮ ದೇವಾಂಗ ಸಂಘ ಹಾಗೂ ಶಾಂತಿಗ್ರಾಮ ಗ್ರಾಮಸ್ಥರ ಸಂಯುಕ್ತ ಆಶ್ರಯದಲ್ಲಿ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಲಾಗಿರುವ ದೇವಾಂಗ ಸಮುದಾಯ ಭವನದ ಭವ್ಯ ಉದ್ಘಾಟನಾ ಸಮಾರಂಭ, ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಹಾಗೂ ರಾಜ್ಯಸಭಾ ಸದಸ್ಯರಾದ ಶ್ರೀ ಕೆ. ನಾರಾಯಣ ಅವರಿಗೆ ಹಮ್ಮಿಕೊಳ್ಳಲಾಗಿರುವ ಅಭಿನಂದನಾ ಸಮಾರಂಭವು ಜೂನ್ 16 ಮತ್ತು 17ರಂದು ಜರುಗಲಿದೆ ಎಂದು ಸಂಘದ ಪದಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವೇದಮೂರ್ತಿ ಶ್ರೀ ಹರಿನಾರಾಯಣಮಯ್ಯ (ಕುಂಬಳೆ) ಅವರ ಪಾವನ ಸಾರಥ್ಯದಲ್ಲಿ ಜೂನ್ 16 ಮಂಗಳವಾರ ಸಂಜೆ 7:00 ಗಂಟೆಯಿಂದ ವಾಸ್ತು ಹೋಮ, ಪೂಜೆ, ಪ್ರಸಾದ ವಿತರಣೆ ಜೂನ್ 17 (ಬುಧವಾರ) ಪ್ರಾತಃಕಾಲ 5:30ಕ್ಕೆ ಗೃಹಪ್ರವೇಶ, ಬೆಳಿಗ್ಗೆ 7:00ಕ್ಕೆ ಗಣಹೋಮ, 10:00 ಗಂಟೆಗೆ ಸಾಮೂಹಿಕ “ಶ್ರೀ ವಿಷ್ಣುಸಹಸ್ರನಾಮ ಪಠಣ”, 11:00 ಗಂಟೆಗೆ ಮಹಾಪೂಜೆ ಮತ್ತು ಪ್ರಸಾದ ವಿತರಣೆ ನಡೆಯಲಿದ್ದು, ಮಧ್ಯಾಹ್ನ 1:30ರಿಂದ ಸಾರ್ವಜನಿಕ ಅನ್ನಸಂತರ್ಪಣೆ ಹಮ್ಮಿಕೊಳ್ಳಲಾಗಿದೆ.
ಜೂನ್ 17ರ ಬುಧವಾರ ಬೆಳಿಗ್ಗೆ 11:15ಕ್ಕೆ ಸಮುದಾಯ ಭವನದ ಉದ್ಘಾಟನಾ ಸಮಾರಂಭ ಮತ್ತು ಸಭಾ ಕಾರ್ಯಕ್ರಮ ಜರುಗಲಿದೆ. ಹಂಪಿಯ ಹೇಮಕೂಟದ ಶ್ರೀ ಗಾಯತ್ರಿ ಪೀಠ ಮಹಾಸಂಸ್ಥಾನದ ಪೀಠಾಧ್ಯಕ್ಷರಾದ ಪರಮ ಪೂಜ್ಯ ಜಗದ್ಗುರು ಶ್ರೀ ಶ್ರೀ ಶ್ರೀ ದಯಾನಂದಪುರಿ ಮಹಾಸ್ವಾಮೀಜಿ ಹಾಗೂ ಕೊಂಡೆವೂರು ಮಠದ ಶ್ರೀ ನಿತ್ಯಾನಂದ ಯೋಗಾಶ್ರಮದ ಪರಮ ಪೂಜ್ಯ ಜಗದ್ಗುರು ಶ್ರೀ ಶ್ರೀ ಶ್ರೀ ಯೋಗಾನಂದ ಸರಸ್ವತೀ ಮಹಾಸ್ವಾಮೀಜಿ ಅವರುಗಳು ದಿವ್ಯ ಸಾನ್ನಿಧ್ಯ ವಹಿಸಿ ದಿವ್ಯ ಆಶೀರ್ವಚನ ನೀಡಲಿದ್ದಾರೆ. ನೂತನ “ಶ್ರೀ ಕೆ. ನಾರಾಯಣ ಸಭಾಂಗಣ”ವನ್ನು ಮಾನ್ಯ ರಾಜ್ಯಸಭಾ ಸದಸ್ಯರಾದ ಶ್ರೀ ಕೆ. ನಾರಾಯಣ ಅವರು ಉದ್ಘಾಟಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಮಾಜಿ ಸಚಿವರು ಹಾಗೂ ಶಾಸಕರಾದ ಶ್ರೀ ಹೆಚ್.ಡಿ. ರೇವಣ್ಣ, ಹಾಸನ ಸಂಸದರಾದ ಶ್ರೀ ಶ್ರೇಯಸ್ ಪಟೇಲ್, ವಿಧಾನ ಪರಿಷತ್ ಸದಸ್ಯರಾದ ಶ್ರೀ ಸೂರಜ್ ರೇವಣ್ಣ, ಮಾಜಿ ಶಾಸಕರಾದ ಶ್ರೀ ಎಂ.ಡಿ. ಲಕ್ಷ್ಮೀನಾರಾಯಣ, ನಿವೃತ್ತ ವಾಣಿಜ್ಯ ತೆರಿಗೆ ಇಲಾಖೆ ಅಧಿಕಾರಿ ಜಿ ಆರ್ ಮಂಜೇಶ್ ಕರ್ನಾಟಕ ರಾಜ್ಯ ದೇವಾಂಗ ಸಂಘದ ಅಧ್ಯಕ್ಷರಾದ ಶ್ರೀ ಪಿ. ರವೀಂದ್ರ ಕಲ್ಬುರ್ಗಿ, ಬೆಂಗಳೂರು ದೇವಾಂಗ ಸಂಘದ ಅಧ್ಯಕ್ಷರಾದ ಡಾ. ಜಿ. ರಮೇಶ್ (ಐಪಿಎಸ್.ನಿ.), ರಾಜ್ಯ ದೇವಾಂಗ ಸಂಘದ ಉಪಾಧ್ಯಕ್ಷರಾದ ಎಸ್. ಸಿ. ಸತೀಶ್ ಹಾಗೂ ಕೊಡಗು ಅಬಕಾರಿ ಇಲಾಖೆ ಡಿ.ಸಿ ಯವರಾದ ಶ್ರೀ ಬಿ. ನಾಗೇಶ್ ಕುಮಾರ್, ಜಿಲ್ಲಾ ದೇವಾಂಗ ಸಂಘದ ಅಧ್ಯಕ್ಷ ವಿ ನಂಜುಂಡಸ್ವಾಮಿ, ಜಿಲ್ಲಾ ದೇವಾಂಗ ನೌಕರರ ಸಂಘದ ಅಧ್ಯಕ್ಷ ಡಾ IIಬಿ. ಎಂ.ವಿಜಯ್ ಸೇರಿದಂತೆ ಹಲವು ಗಣ್ಯರು, ಅಧಿಕಾರಿಗಳು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.
ಈ ಸಮಾರಂಭದ ಅಧ್ಯಕ್ಷತೆಯನ್ನು ಶಾಂತಿಗ್ರಾಮದ ದೇವಾಂಗ ಸಂಘದ ಅಧ್ಯಕ್ಷರಾದ ಶ್ರೀ ಜಿ.ಕೆ. ಸುಬ್ರಹ್ಮಣ್ಯ ಅವರು ವಹಿಸಲಿದ್ದು, ಶಾಂತಿ ಗ್ರಾಮದ ಸುತ್ತಮುತ್ತಲಿನ ಸಾರ್ವಜನಿಕರು, ಭಕ್ತಾದಿಗಳು ಹಾಗೂ ದೇವಾಂಗ ಸಮಾಜದ ಬಂಧುಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ, ಎಲ್ಲ ಧಾರ್ಮಿಕ ವಿಧಿವಿಧಾನಗಳಲ್ಲಿ ಪಾಲ್ಗೊಂಡು ತೀರ್ಥಪ್ರಸಾದ ಸ್ವೀಕರಿಸಿ, ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕಾಗಿ ಶಾಂತಿ ಗ್ರಾಮ ದೇವಾಂಗ ಸಂಘದ ಪದಾಧಿಕಾರಿಗಳು ಹಾಗೂ ಗ್ರಾಮಸ್ಥರು ಪತ್ರಿಕಾ ಪ್ರಕಟಣೆಯ ಮೂಲಕ ವಿನಮ್ರವಾಗಿ
